ಸಚಿವ ದಿನೇಶ್ ಗುಂಡೂರಾವ್ಗೆ ಧಾರವಾಡ ಜಿಲ್ಲೆ ಉಸ್ತುವಾರಿ ಹೊಣೆ
ಬೆಂಗಳೂರು: ಆಹಾರ- ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ಗೆ ಧಾರವಾಡ ಜಿಲ್ಲೆ ಉಸ್ತುವಾರಿಯ ಹೆಚ್ಚುವರಿ ಹೊಣೆಗಾರಿಕೆ ನಿರ್ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಂತೋಷ್ ಲಾಡ್ ರಾಜಿನಾಮೆ ಬಳಿಕ ಹುಬ್ಬಳ್ಳಿ- ಧಾರವಾಡ ಜಿಲ್ಲಾ ಉಸ್ತುವಾರಿಗೆ ಯಾವುದೇ ಸಚಿವರನ್ನು ನಿಯುಕ್ತಿಗೊಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ದಿನೇಶ್ ಗುಂಡೂರಾವ್ ಹಾಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿದ್ದು, ಸಚಿವ ಸಂಪುಟ ವಿಸ್ತರಣೆಯಾಗುವವರೆಗೆ ಈ ಜವಾಬ್ದಾರಿ ನಿಭಾಯಿಸಲು ಸೂಚಿಸಲಾಗಿದೆ.