ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜ. 28ರಂದು ಲೋಕಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Mainashree
Updated On : 24 Dec 2013, 10:53 am

ಹುಬ್ಬಳ್ಳಿ: ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಜ. 28ರಂದು ಪ್ರಕಟಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್ ಹೇಳಿದರು.
ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತೋಶ್ರೀ ಮೀನಾಕ್ಷಮ್ಮ ಇತ್ತೀಚಿಗೆ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಲು ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ತೆರಳಲು ಸೋಮವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ನರೇಂದ್ರ ಮೋದಿ ಪ್ರಧಾನಿಯಾಗಲು ಬೆಂಬಲ ಸೂಚಿಸುವ ಎಲ್ಲರಿಗೂ ಮುಕ್ತ ಮನಸ್ಸಿನಿಂದ ಸ್ವಾಗತಿಸುವುದಾಗಿ ಹೇಳಿದರು.
ಚರ್ಚಿಸಿ ತೀರ್ಮಾನ: ಕೆಜೆಪಿ ಸಂಸ್ಥಾಪಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ವಾಪಸ್ಸಾತಿಗೆ ಸಂಬಂಧಿಸಿದಂತೆ ಮಾಧ್ಯಮದವರಿಂದ ತೂರಿ ಬಂದ ಪ್ರಶ್ನೆಗೆ ಉತ್ತರಿಸಿದ ರಾಜನಾಥಸಿಂಗ್, ಈ ಕುರಿತಂತೆ ರಾಜ್ಯ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಶಿಕ್ಷೆ ಅನುಭವಿಸಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರ ರಚಿಸಲು ಮುಂದಾಗಿರುವುದನ್ನು ಸ್ವಾಗತಿಸಿದ ಅವರು, ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಕೇಜ್ರಿವಾಲ್ ಭ್ರಷ್ಟಾಚಾರಿಗಳನ್ನು ಜೈಲಿಗೆ ಅಟ್ಟುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತಪ್ಪು ಮಾಡಿದವರು ಯಾರೇ ಇರಲಿ ಶಿಕ್ಷೆ ಅನುಭವಿಸಲಿಕ್ಕೆ ಬೇಕು. ಬಿಜೆಪಿಯ ಯಾವೊಬ್ಬ ನಾಯಕರು ಭ್ರಷ್ಟಾಚಾರವೆಸಗಿಲ್ಲ ಎಂದು ಸಮರ್ಥನೆ ನೀಡಿದರು. ನಂತರ, ಹೆಲಿಕ್ಟಾಪ್ಟರ್ ಮೂಲಕ ಹುಬ್ಬಳ್ಳಿಯಿಂದ ಸೊರಬಕ್ಕೆ ಪ್ರಯಾಣ ಬೆಳೆಸಿದರು. ಬಿಜೆಪಿ ಹಿರಿಯ ಮುಖಂಡ ಅನಂತಕುಮಾರ್, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ, ಗ್ರಾಮೀಣ ಅಧ್ಯಕ್ಷ ಎಂ.ಆರ್. ಪಾಟೀಲ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಹೇಶ ಟೆಂಗಿನಕಾಯಿ, ರಂಗಾ ಬದ್ದಿ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement