ಆರ್ಟಿಇ ಪ್ರವೇಶದ ಮಕ್ಕಳಿಗೆ ವೆಬ್
ಧಾರವಾಡ: ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ 2014-15ನೇ ಸಾಲಿನಲ್ಲಿ ಮಕ್ಕಳ ಶಿಕ್ಷಣ ಹಕ್ಕು (ಆರ್ಟಿಇ) ಕಾಯ್ದೆ ಅಡಿಯಲ್ಲಿ ಪ್ರವೇಶ ಬಯಸುವ ಮಕ್ಕಳ ಪಾಲಕರಿಗೆ ಹತ್ತಿರವಾಗುವ ಶಾಲೆಗಳಿಗೆ ಪ್ರವೇಶ ಅರ್ಜಿಗಳನ್ನು ಸಂಬಂಧಿಸಿದ ಶಾಲೆಗಳ ಮುಖ್ಯಗುರುಗಳಿಂದ ಅಥವಾ ವೆಬ್ಸೈಟ್ ಢಿಢಿಢಿ.ಝ್ಛ್ಟ್ಟಟಊಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ ನಲ್ಲಿ ಪಡೆದು ಪ್ರವೇಶ ಬಯಸುವ ಶಾಲೆಗೆ ನೀಡಬಹುದು.
ಜ. 6ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಯಲ್ಲಿ ಲಭ್ಯವಿರುವ ಶೇ. 25 ಸೀಟ್ಗಳನ್ನು ಪ್ರಕಟಿಸುತ್ತಾರೆ. ಜ. 7ರಿಂದ 8ರ ವರೆಗೆ ಶಾಲಾ ದಾಖಲಾತಿ ಕೋರಿ ಪೋಷಕರು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾಗಿದೆ.
ಶಾಲೆಯವರು ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲನೆ ನಡೆಸಿ ಆಯ್ಕೆ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲ್ಲಿಸಲು ಫೆ. 17 ಕೊನೆ ದಿನ. ಕ್ಷೇತ್ರ ಶಿಕ್ಷಣಾಧಿಕಾರಿಗಳು ದಾಖಲಾತಿಯನ್ನು ಅನುಮೋದಿಸಿ ಪಟ್ಟಿಯನ್ನು ಸಂಬಂಧಪಟ್ಟ ಶಾಲೆಗಳಿಗೆ ಕಳುಹಿಸಲು ಕೊನೆ ದಿನ ಫೆ. 28 ದಿನವಾಗಿದೆ.
ಮಾಚ್ 3ರಂದು ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.