ಧಾರವಾಡ

ಸಿಎಂ ಭೇಟಿಗಾಗಿ ದಿಢೀರ್ ಧರಣಿ

ಧಾರವಾಡ:  ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ 10 ದಿನಗಳಿಂದ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದ ಗುತ್ತಿಗೆ ಆಧಾರಿತ ಪೌರಕಾರ್ಮಿಕರು ಭಾನುವಾರ ತಮ್ಮ ಧರಣಿ ಸತ್ಯಾಗ್ರಹವನ್ನು ದಿಢೀರ್ ಎಂದು ವಿವೇಕಾನಂದ ವೃತ್ತಕ್ಕೆ ಸ್ಥಳಾಂತರಿಸಿದ್ದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ಯುದ್ಧ ನಡೆಯಿತು.
ವಿವೇಕಾನಂದ ಮೂರ್ತಿ ಅನಾವರಣ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರಂತರ ನೀರು ಪೂರೈಕೆ ಯೋಜನೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗಮಿಸುತ್ತಿದ್ದಾರೆ ಎಂದು ತಿಳಿದ ಪ್ರತಿಭಟನಾಕಾರರು ಮುಖ್ಯಮಂತ್ರಿಗೆ ಮುತ್ತಿಗೆ ಹಾಕುವ ಯೋಜನೆ ರೂಪಿಸಿದ್ದರು.
ಮುಖ್ಯಮಂತ್ರಿ ಶೆಟ್ಟರ್ ಅವರ ಆಗಮನಕ್ಕೆ ಮುಂಚೆ ವೇದಿಕೆಯ ಒಂದು ಬದಿಗೆ ಕುಳಿತ ಪ್ರತಿಭಟನಾಕಾರರು ನಮಗೆ ಅವಕಾಶ ನೀಡಿ ಎಂದು ಪೊಲೀಸರನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಧರಣಿ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಪ್ರತಿಭಟನಾಕಾರರಿಗೆ ಮುಖ್ಯಮಂತ್ರಿ ಶೆಟ್ಟರ್ ಅವರಲ್ಲಿ ನಿವೇದನೆ ಸಲ್ಲಿಸುವುದಕ್ಕೆ ಅವಕಾಶ ದೊರೆಯಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!