ನವೋದಯ ಸಿಬ್ಬಂದಿ ಬೃಹತ್ ಪ್ರತಿಭಟನೆ
ಧಾರವಾಡ: ನಿವೃತ್ತಿ ಪಿಂಚಣಿ ನೀಡಬೇಕೆಂದು ಒತ್ತಾಯಿಸಿ ಜವಾಹರ ನವೋದಯ ವಿದ್ಯಾಲಯ ಶಿಕ್ಷಕ ಹಾಗೂ ಸಿಬ್ಬಂದಿ ಸೋಮವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಿಸಿಎಸ್ 1971ರ ಪಿಂಚಣಿ ಜಾರಿಗೊಳಿಸಬೇಕು. ಶಿಕ್ಷಕೇತರ ಶೇ. 10ರಷ್ಟು ವಿಶೇಷ ಭತ್ಯೆ ನೀಡಬೇಕು. ನಿಯಮಿತವಾದ ಬಡ್ತಿ ಮತ್ತು ವರ್ಗಾವಣೆ ನೀತಿಯಲ್ಲಿ ಪಾರದರ್ಶಕತೆ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ. ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ವಿದ್ಯಾಲಯದ ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.