ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಆಧಾರ್ ಕೇಂದ್ರಗಳಲ್ಲಿ ಏಜೆಂಟರ ಹಾವಳಿ..!

Parashurama
Updated On : 14 Feb 2013, 12:42 pm

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಆಧಾರ್ ನೋಂದಣಿ ಕೇಂದ್ರಗಳ ಸುತ್ತ ಆಧಾರ್ ಅರ್ಜಿ ಫಾರ್ಮ್‌ಗಳ ಮಾರಾಟಕ್ಕೆ ಅನಧೃತ ಏಜೆಂಟ್‌ರು ಹುಟ್ಟಿಕೊಂಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಹಿತ ವರ್ಧಕ ಸಮಿತಿ ಆರೋಪಿಸಿದೆ.  ಈ ಕುರಿತು ಬುಧವಾರ ತಹಸೀಲ್ದಾರ್‌ಗೆ ಸಲ್ಲಿಸಿರುವ ಮನವಿಯಲ್ಲಿ, ಬಡವರಿಗೆ ಆಧಾರ್ ಅರ್ಜಿ ಫಾರ್ಮ್‌ಗಳು ಲಭಿಸುತ್ತಿಲ್ಲ. ಬಡವರು, ವೃದ್ಧರು ಮತ್ತು ಮಹಿಳೆಯರು ಸರತಿ ಸಾಲಿನಲ್ಲಿ ನಿಂತರೂ ಅವರಿಗೆ ಅರ್ಜಿ ಫಾರ್ಮ್‌ಗಳು ದೊರೆಯುತ್ತಿಲ್ಲ. ಆದರೆ ಅದೇ ಕೇಂದ್ರದ ಸುತ್ತ ಅನಧಿಕೃತ ಏಜೆಂಟ್‌ರು ಅರ್ಜಿ ಫಾರ್ಮ್‌ಗಳನ್ನು ರು. 75ರಿಂದ 100ಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. ಅವಳಿ ನಗರ ಬಹುತೇಕ ಪ್ರದೇಶಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಜನರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವುದಕ್ಕೆ ಹುಬ್ಬಳ್ಳಿ-ಧಾರವಾಡದ ಎಲ್ಲ ವಲಯ ಕಚೇರಿಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸಬೇಕು. ಇದರಿಂದ ದಿನಗೂಲಿ ಕಾರ್ಮಿಕರಿಗೆ, ವೃದ್ಧರಿಗೆ, ಅಂಗವಿಕಲರಿಗೆ, ಚಿಕ್ಕ ಹಾಗೂ ಕಿರುಕುಳ ವ್ಯಾಪಾರಸ್ಥರಿಗೆ ಮತ್ತು ಖಾಸಗಿ ನೌಕರರಿಗೆ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಇನ್ನಷ್ಟು ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ವಿ. ಹಿರೇವಡೆಯರ್, ಜಿಲ್ಲಾಧ್ಯಕ್ಷ ಮಂಜುನಾಥ್ ಇಳಿಗೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ನಾಡಕರ್ಣಿ, ಅಟೋ ಚಾಲಕ ಸಂಘದ ಉಪಾಧ್ಯಕ್ಷ ಮಂಜುನಾಥ ಉಳ್ಳಾಗಡ್ಡಿ, ಎಸ್‌ಸಿ, ಎಸ್‌ಟಿ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮು ನಿರಲಗಿ, ವಿನಾಯಕ ದಲಭಂಜನ್, ಶಂಕರ್ ಕಬಾಡೆ, ಮಾಲತೇಶ ಪಟ್ಟೇದ, ವಿನಯ ಬೇಟಗೇರಿ ಸೇರಿದಂತೆ ಹಲವಾರು ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments