ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಗ್ರಾಪಂ ನೌಕರರಿಗೆ ಕನಿಷ್ಠ ವೇತನಕ್ಕೆ ಮನವಿ

Mainashree
Updated On : 23 Feb 2013, 11:10 am

ಹುಬ್ಬಳ್ಳಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘ ಧಾರವಾಡ ಜಿಲ್ಲಾ ಘಟಕದ ಸದಸ್ಯರು ಶುಕ್ರವಾರ ಸಿಎಂ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು.  ಈ ಹಿಂದೆ ಪಂಚಾಯತ್ ರಾಜ್ ಸಚಿವರಾಗಿದ್ದಾಗ ಗ್ರಾಪಂ ನೌಕರರ ವೇತನಕ್ಕೆ ಪ್ರತ್ಯೇಕ ಅನುದಾನ ನಿಗದಿಗೆ ಶಿಫಾರಸ್ಸು ಮಾಡಿದ್ದರು. ಆದರೆ, ಈವರೆಗೂ ಪ್ರತ್ಯೇಕ ಅನುದಾನ ನಿಗದಿ ವ್ಯವಸ್ಥೆ ಇನ್ನೂ ಕಾರ್ಯಗತಗೊಂಡಿಲ್ಲ. ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿರುವ ಶೆಟ್ಟರ್ ಅವರು ಈ ನಿಟ್ಟಿನಲ್ಲಿ ಗಮನ ಹರಿಸಿ ಸಮಸ್ಯೆ ಪರಿಹರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. 2004 ಮತ್ತು 2008ರಲ್ಲಿ ರಚಿಸಲಾಗಿರುವ ಮತ್ತು ಇನ್ನೂ ಅಪೂರ್ಣವಾಗಿರುವ ಗ್ರಾಪಂ ಸೇವಾ ಸಿಬ್ಬಂದಿ ಸೇವಾ ಸಿಬ್ಬಂದಿ ನಿಯಮವನ್ನು ತಕ್ಷಣ ನಗರ ಪಾಲಿಕೆ ಸಂಸ್ಥೆಗಳಿಗೆ ಇರುವಂತೆ ರಚಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಕಂಪ್ಯೂಟರ್ ಆಪರೇಟರ್ ಹುದ್ದೆಗಳನ್ನು ಹೊರ ಗುತ್ತಿಗೆ ನೀಡಬಾರದು. ಎಲ್ಲ ಗ್ರಾಪಂ ಸಿಬ್ಬಂದಿಗೆ ನಿವೃತ್ತಿ ವೇತನ ಸೇರಿದಂತೆ ವಿವಿಧ ಸೌಲಭ್ಯ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement