ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಇಂದು ಸರ್ವೋತ್ತಮ ರಾಜ್ಯ ಪ್ರಶಸ್ತಿ ವಿತರಣೆ

Mainashree
Updated On : 26 Jan 2013, 10:52 am

ಧಾರವಾಡ: ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಚೇರಿ ಸಹಾಯಕ ನಿರ್ದೇಶಕ ಎನ್.ಎಂ. ಕುಲಕರ್ಣಿ ಸೇರಿದಂತೆ 10 ಜನರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ. ಉತ್ಕೃಷ್ಟ ಸೇವೆ ಸಲ್ಲಿಸುವ ರಾಜ್ಯ ಸರ್ಕಾರಿ ನೌಕರರಿಗೆ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದಲ್ಲಿ ಸರ್ಕಾರ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ತೀರ್ಮಾನಿಸಿದೆ. ಪ್ರಶಸ್ತಿ ತಲಾ ರು. 25 ಸಾವಿರ ನಗದು ಪುರಸ್ಕಾರ, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿದೆ. ಜ. 26ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜಭವನದಲ್ಲಿ ನಡೆಯುವ ಪ್ರತ್ಯೇಕ ಸಮಾರಂಭದಲ್ಲಿ ರಾಜ್ಯಪಾಲರು ವಿಜೇತ ನೌಕರರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಎನ್.ಎಂ. ಕುಲಕಣಿ ಅವರನ್ನು ಇಲಾಖೆ ಅಪರ ಆಯುಕ್ತ ಎ.ಎನ್. ಪಾಟೀಲ, ನಿರ್ದೇಶಕ ಜಿ. ಎಸ್. ನಾಯ್ಕ, ಜಂಟಿ ನಿರ್ದೇಶಕ ಸಿದ್ಧರಾಮ ಮನಹಳ್ಳಿ, ಕೆ.ಎಸ್. ಮಣಿ, ಮಂಗಳಾ ನಾಯ್ಕ ಇತರರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement