29ಕ್ಕೆ ಸ್ಕೂಲ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಲೋಕಾರ್ಪಣೆ: ಕೋರೆ
ಹುಬ್ಬಳ್ಳಿ: ಕೈಗಾರಿಕಾ ಕ್ಷೇತ್ರದ ತಂತ್ರಜ್ಞಾನದ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಎಲ್ಇ ಸಂಸ್ಥೆಯ ಬಿ.ವಿ.ಬಿ ತಾಂತ್ರಿಕ ಮಹಾವಿದ್ಯಾಲಯ ಕಾರ್ಯೋನ್ಮುಖವಾಗಿದ್ದು, ಇದೀಗ ಸ್ಕೂಲ್ ಆಫ್ ಮೆಕ್ಯಾನಿಕಲ್ ಇಂಜನಿಯರಿಂಗ್ ಹಾಗೂ ಸ್ಕೂಲ್ ಆಫ್ ಮ್ಯಾನೇಜಮೆಂಟ್ ಸ್ಟಡೀಸ್ ಆ್ಯಂಡ್ ರೀಸರ್ಚ್ ಅನ್ನು ಜ.29 ರಂದು ಲೋಕಾರ್ಪಣೆಗೊಳಿಸುತ್ತಿದೆ.ರಾಜ್ಯಸಭಾ ಸದಸ್ಯರೂ ಆಗಿರುವ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾನಗರದ ಬಿವಿಬಿ ಕಾಲೇಜ್ನ ಆವರಣದಲ್ಲೇ 1 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಈ ಕಟ್ಟಡ ನಿರ್ಮಿಸಲಾಗಿದ್ದು, ನೆಲ ಹಾಗೂ 2 ಮಳಿಗೆ ಹೊಂದಿದೆ. ಈ ಕಟ್ಟಡವನ್ನು ಸುಮಾರು 10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದರು. ಈ ಕಟ್ಟಡದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸೌಲಭ್ಯವಿರುವ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಷಯಕ್ಕೆ ಸಂಬಂಧಿಸಿದ ವಿಭಾಗಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲಿವೆ. 4.5 ಕೋಟಿ ವೆಚ್ಚದ ಉಪಕರಣಗಳನ್ನು ವಿವಿಧೆಡೆಯಿಂದ ತರಿಸಿಕೊಳ್ಳಲಾಗಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.