ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜನಸಂಖ್ಯೆ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ವಿಫಲ: ಪಿ.ಎ. ಮೇಘಣ್ಣವರ

Mainashree
Updated On : 6 Jul 2013, 10:45 am

ಧಾರವಾಡ: ಜನಸಂಖ್ಯೆ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ನಿರೀಕ್ಷಿತ ಪ್ರಮಾಣದಲ್ಲಿ ಗುರಿ ಸಾಧಿಸಲು ವಿಫಲವಾಗಿದೆ. ಆದರೆ, ಸರ್ಕಾರೇತರ ಸಂಸ್ಥೆಯಾದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ ದೇಶದ ಜನಸಂಖ್ಯೆ ನಿಯಂತ್ರಣದಲ್ಲಿ ಬಹು ದೊಡ್ಡ ಪಾತ್ರ ವಹಿಸಿರುವುದು ಶ್ಲಾಘನೀಯ ಎಂದು ಜಿಪಂ ಸಿಇಓ ಪಿ.ಎ. ಮೇಘಣ್ಣವರ ಹೇಳಿದರು. ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಉದರ ದರ್ಶಕ ಶಸ್ತ್ರಚಿಕಿತ್ಸೆ ತರಬೇತಿ ಕೇಂದ್ರ ಉದ್ಘಾಟನೆ ವೇಳೆ ಮಾತನಾಡಿ, ಈ ಸಂಸ್ಥೆಗೆ ಬೇಕಾದ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ, ಗ್ರಾಮೀಣ ಮಹಿಳೆ, ಪುರುಷರನ್ನು ಜಾಗೃತಗೊಳಿಸಿ, ಉದರ ದರ್ಶಕ ಶಸ್ತ್ರಚಿಕಿತ್ಸೆ ಮೂಲಕ ಜನಸಂಖ್ಯೆ ನಿಯಂತ್ರಣಕ್ಕೆ ದುಡಿವ ಸಂಸ್ಥೆಗೆ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎನ್.ಎಂ. ಅಂಗಡಿ, ಎಸ್‌ಡಿಎಂ ಆಸ್ಪತ್ರೆಯ ಡಾ೤ ಓ.ಎ. ಮಹಿಪಾಲ, ಡಾ೤ ಮೋನಿಕ ಕಾಮತ್, ಪ್ರಸೂತಿ ತಜ್ಞ ಡಾ೤ ರತ್ನಮಾಲಾ ಕುಲಕರ್ಣಿ, ಫ್ಯಾಮಿಲಿ ಪ್ಲಾನಿಂಗ್ ಸಂಸ್ಥೆ ಜಿಲ್ಲಾಧ್ಯಕ್ಷ ಡಾ೤ ರಾಜನ್ ದೇಶಪಾಂಡೆ, ಡಾ೤ ಮದನ ಮೋಹನ ತಾವರಗೇರಿ, ಸುಜಾತ ಅನಿಶೆಟ್ಟರ್ ಇದ್ದರು. ವಿ.ವಿ. ಕಟ್ಟಿ ಸ್ವಾಗತಿಸಿದರು. ನಿಂಗಪ್ಪ ಮಡಿವಾಳರ ನಿರೂಪಿಸಿದರು. ಪಿ.ಪಿ. ಗಾಯಕವಾಡ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement