ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಪಾಲಿಕೆ ಆಯುಕ್ತರ ನೇಮಕಕ್ಕೆ ಆಗ್ರಹ

Mainashree
Updated On : 7 Jul 2013, 12:15 pm

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಆಯುಕ್ತರು ಮತ್ತು ಜನಪ್ರತಿನಿಧಿಗಳ ಆಡಳಿತ ಇಲ್ಲದಿರುವುದನ್ನು ಖಂಡಿಸಿ ಶನಿವಾರ ಜೈಭೀಮ ಸೇನೆ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಾಲ್ಕು ತಿಂಗಳುಗಳ ಹಿಂದೆಯೇ ಪಾಲಿಕೆಗೆ ಸದಸ್ಯರು ಆಯ್ಕೆಯಾಗಿದ್ದಾರೆ. ಆದರೆ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಸರ್ಕಾರ ಮೀಸಲಾತಿ ಪ್ರಕಟಿಸದ ಹಿನ್ನೆಲೆಯಲ್ಲಿ ಆಯ್ಕೆಯಾಗಿರುವ ಸ್ಥಳೀಯ ಜನಪ್ರತಿನಿಧಿಗಳು ಪ್ರಮಾಣ ವಚನ ಕೂಡ ಸ್ವೀಕರಿಸಿಲ್ಲ. ಅಲ್ಲದೇ ಮಹಾನಗರ ಪಾಲಿಕೆಗೆ ಆಯುಕ್ತರು ಇಲ್ಲದ ಕಾರಣ ಅವಳಿ ನಗರದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದ್ದು, ನಗರದ ಸ್ವಚ್ಛತೆ ಮರೀಚಿಕೆಯಾಗಿದೆ.
ಸ್ವಚ್ಛತೆ ವಿಫಲವಾಗಿರುವುದರಿಂದ ಡೇಂಘಿ, ಕಾಲರಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಅಧಿಕಾರಿಗಳು ಕೂಡ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು. ಈ ನಿಟ್ಟಿನಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಕಲ್ಪಿಸಬೇಕು ಎಂದು ತಹಸೀಲ್ದಾರ ಮುಖಾಂತರ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ರಮೇಶ ವಡ್ಡಪಲ್ಲಿ, ಬಸಂತಕುಮಾರ ಅನಂತಪುರ, ಅಸ್ಲಂಮುಲ್ಲಾ, ಶಂಕರ ಪವಾರ, ಜಯರಾಮ ತಿಮ್ಮಸಂದ್ರ, ದ್ಯಾಮಣ್ಣ ಡೊಂಗಿ, ರಾಜು ನಾಯಕವಾಡ, ಮಲ್ಲಿಕ ಬೇಪಾರಿ ಮತ್ತು ಭಾಸ್ಕರ್ ಮುತ್ತಗಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement