ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಗುತ್ತಿಗೆ ಪೌರಕಾರ್ಮಿಕರ ಶೀಘ್ರ ಕಾಯಂ

Lingaraj Badiger
Updated On : 8 Jul 2013, 11:31 am

ಹುಬ್ಬಳ್ಳಿ:  ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಪದ್ಧತಿ ರದ್ದುಪಡಿಸುವುದಕ್ಕೆ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚಾಲನೆ ದೊರೆತಿದ್ದು, ಶೀಘ್ರ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಈಚೆಗೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕ್ಷೇತ್ರದ ವಸತಿ ರಹಿತರಿಗೆ ಆಶ್ರಯ ಮನೆಗಳನ್ನು ನಿರ್ಮಿಸಿ ವಿತರಿಸಲಾಗುವುದು. ಶೋಷಿತ ಜನಾಂಗಕ್ಕೆ ಸಾಮಾಜಿಕ ಹಕ್ಕು ಮತ್ತು ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಕಾರ್ಮಿಕ ನಾಯಕ ಎಫ್.ಎಚ್. ಜಕ್ಕಪ್ಪನವರ ಪ್ರಾಸ್ತಾವಿಕ ಮಾತನಾಡಿ, ರಾಜ್ಯದಲ್ಲಿ ಗುತ್ತಿಗೆ ಪೌರ ಕಾರ್ಮಿಕರನ್ನು ನಿರಂತರವಾಗಿ ಶೋಷಿಸಲಾಗುತ್ತಿದೆ. ದಯನೀಯ ಬದುಕು ಸಾಗಿಸುತ್ತಿರುವ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಮ್ಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಫಿ ಮುದ್ದೇಬಿಹಾಳ, ನಿಂಗಪ್ಪ ರಾಮಯ್ಯನವರ, ಬಸವರಾಜ ಹಾಲಾಪುರ, ಪ್ರಕಾಶ ಗುಡಿಹಾಳ, ಗುರುನಾಥ ರೋಣ, ನಜೀರ್ ಹೊನ್ನ್ಯಾಳ, ಹಾಲುಂಡಯ್ಯ ರಾಮಯ್ಯನವರ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement