ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕಿಮ್ಸ್ ನಿರ್ದೇಶಕರಾಗಿ ಡಾ. ಹಂಗರಗಾ ನೇಮಕ

Vishwanath S
Updated On : 25 Jul 2013, 11:00 am

ಹುಬ್ಬಳ್ಳಿ: ಹಠಾತ್ ಬೆಳವಣಿಗೆಯೊಂದರಲ್ಲಿ ಇಲ್ಲಿಯ ಕಿಮ್ಸ್ ನಿರ್ದೇಶಕ ಸ್ಥಾನದಿಂದ ಡಾ. ವಸಂತಾ ಕಾಮತ್ ಅವರನ್ನು ಬಿಡುಗಡೆಗೊಳಿಸಿರುವ ಸರ್ಕಾರ ಈ ಸ್ಥಾನಕ್ಕೆ ಪ್ರಭಾರಿ ನಿರ್ದೇಶಕರನ್ನಾಗಿ ಡಾ. ಯು. ಎಸ್. ಹಂಗರಗಾ ಅವರನ್ನು ನೇಮಿಸಿ ಆದೇಶಿಸಿದೆ. 60 ವರ್ಷ ವಯಸ್ಸು ಮೇಲ್ಪಟ್ಟವರು ನಿರ್ದೇಶಕ ಸ್ಥಾನದಲ್ಲಿರಬಾರದು ಎಂಬ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ವಸಂತಾ ಕಾಮತ್ ಅವರನ್ನು ನಿರ್ದೇಶಕಿ ಸ್ಥಾನದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೂ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರೊಂದಿಗೆ ಮಾಡಿಕೊಂಡಿದ್ದ ಕಿರಿಕ್‌ನಿಂದಾಗಿಯೇ ಆದ ತಲೆದಂಡ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಹಂಗರಗಾ ಅವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಕಿಮ್ಸ್ ಸಿಇಒ ಕಚೇರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಫಾಕ್ಸ್ ಮೂಲಕ ಮಾಹಿತಿ ರವಾನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement