ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಬೀಗ ಮುರಿದು ಲಕ್ಷಾಂತರ ಮೌಲ್ಯದ ಕಳ್ಳತನ

Mainashree
Updated On : 5 Jun 2013, 11:18 am

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 4
ಯಾರೂ ಇಲ್ಲದ ಸಮಯ ಸಾಧಿಸಿ ಮನೆಯೊಂದರ ಒಳಗ್ಗೆ ನುಗ್ಗಿದ ಕಳ್ಳರು, ಲಕ್ಷಾಂತರ ಮೌಲ್ಯದ ಬೆಳ್ಳಿ ಸಾಮಾನುಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಸಂತೋಷನಗರದ ವಿನಾಯಕ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕುಲಕರ್ಣಿ ಎಂಬುವರಿಗೆ ಸೇರಿದ ಮನೆಯಲ್ಲೇ ಈ ಕಳ್ಳತನ ನಡೆದಿದೆ. ಮನೆಯಲ್ಲಿನ ಜನರು ಕೆಲಸದ ನಿಮಿತ್ತ ಬೆಳಗ್ಗೆ 8ಕ್ಕೆ ಮನೆಗೆ ಬೀಗ ಹಾಕಿ ತೆರಳಿದಾಗ, ಕಳ್ಳತರು ಕೈಚಳಕ ತೋರಿದ್ದಾರೆ.
ಮನೆ ಮುಂಬಾಗಿಲು ಕೀಲಿ ಮುರಿದು ಒಳಗೆ ನುಗ್ಗಿದ ಕಳ್ಳರು, ಬೆಲೆ ಬಾಳುವ ವಸ್ತುಗಳಿಗಾಗಿ ಮನೆಯಲ್ಲ ತಡಕಾಡಿ ಕೊನೆಗೆ ಕೈಗೆ ಸಿಕ್ಕ ರು. 2 ಸಾವಿರ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ದೋಚಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದಂತೆಯೇ ಘಟನಾ ಸ್ಥಳಕ್ಕೆ ಎಸಿಪಿ ಅಡಿವೆಪ್ಪ ಬಡಿಗೇರ, ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್ ಅಲ್ಲಮಪ್ರಭು ಹಿರೇಗೌಡರ ಸಿಬ್ಬಂದಿಯೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.
ನೆರೆಯವರ ಬೇಜವಾಬ್ದಾರಿ!
ಕುಲಕರ್ಣಿ ಕುಟುಂಬದ ಸದಸ್ಯರೆಲ್ಲರೂ ಬೇರೆಡೆಗೆ ತೆರಳಿದ್ದು, ಮಗಳು ಮನೆಗೆ ಕೀಲಿ ಹಾಕಿ ಕಾಲೇಜ್‌ಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಹುಡುಕಾಡುವಾಗ ಸಾಕಷ್ಟು ಶಬ್ದವಾಗಿದ್ದರೂ ಅಕ್ಕಪಕ್ಕದ ಜನತೆ ಹೊರಗೆ ಬಾರದಿರುವುದು ಕಳ್ಳರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿತ್ತೆಂದು ಸ್ಥಳೀಯರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆರೆಯವರು ಈ ಸಂದರ್ಭದಲ್ಲಿ ಎಚ್ಚೆತ್ತುಕೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದರೆ ಈ ಕಳ್ಳತನ ನಡೆಯುತ್ತಿರಲಿಲ್ಲ ಎನ್ನಲಾಗಿದೆ. ಯಾವುದೇ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಲ್ಲಿ ತಕ್ಷಣ ಸಂಬಂಧಿತ ಠಾಣೆ ಅಥವಾ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ ಪೊಲೀಸರ ಕಾರ್ಯಕ್ಕೆ ಸಹಕರಿಸುವಂತೆ ಹಿರಿಯ ಅಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.
ಬಂಧನ: ತಾಲೂಕಿನ ಅಂಚಟಗೇರಿ ಗ್ರಾಮದ ಗುಡ್ಡದಲ್ಲಿ ಇಸ್ಪೀಟ್ ಜೂಟಾಟವಾಡುತ್ತಿದ್ದ ಆರು ಜನರನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಸಂಜೆ 4.30ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಇನ್‌ಸ್ಪೆಕ್ಟರ್ ಆರ್.ಕೆ. ಪಾಟೀಲ ಹಾಗೂ ಪಿಎಸ್‌ಐ ಜಮಾದಾರ ನೇತೃತ್ವದ ತಂಡ, ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement