ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಪ್ರತಿ ವಿಭಾಗದಲ್ಲೂ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ: ಖಾದರ್

Rashmi Kasaragodu
Updated On : 20 Jun 2013, 12:53 pm

ಧಾರವಾಡ: ಸರ್ಕಾರಿ ಆಸ್ಪತ್ರೆಗಳೂ ಉನ್ನತ ಸೌಲಭ್ಯಗಳನ್ನು ಹೊಂದಿ ಈ ಮೂಲಕ ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲ ವಿಭಾಗಗಳಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಬುಧವಾರ ಇಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಇದಲ್ಲದೇ, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಗ್ಗದ ದರದಲ್ಲಿ ಔಷಧ ವಿತರಿಸುವ ಮಳಿಗೆಗಳನ್ನು ತೆರೆಯಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಈ ಬಾರಿ ಬಜೆಟ್‌ನಲ್ಲಿ ಮೀಸಲಿರಿಸುವುದಾಗಿ ಹೇಳಿದರು. ವೈದ್ಯಕೀಯ ಸೇವೆ ಒದಗಿಸಲು ಸರ್ಕಾರ ಹಲವು ಯೋಜನೆಗಳನ್ನು ಹಾಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರತೆ ಇರುವ ವೈದ್ಯರ ಮತ್ತು ಇತರ ಸಲಕರಣೆಗಳ ಕೊರತೆ ನಿವಾರಿಸಲು ಅಗತ್ಯ ಅನುದಾನ ಸಹ ಒದಗಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement