ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮಾರುಕಟ್ಟೆಗೆ ಪುಸ್ತಕ ಬಿಡುಗಡೆ ಮಾಡಿ

Rashmi Kasaragodu
Updated On : 28 Jun 2013, 11:39 am

ಹುಬ್ಬಳ್ಳಿ:  ಪ್ರಥಮ ಪಿಯುಸಿ ಹಿಂದಿ ಮತ್ತು ಗಣಿತಶಾಸ್ತ್ರ ಪುಸ್ತಕಗಳನ್ನು ತಕ್ಷಣ ಮಾರುಕಟ್ಟೆ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು. ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳಾಗಿದ್ದು ಇನ್ನೂವರೆಗೂ ಸರ್ಕಾರ ಪ್ರಥಮ ಪಿಯುಸಿಯ ಹಿಂದಿ ಮತ್ತು ಗಣಿತಶಾಸ್ತ್ರ ಪುಸ್ತಕಗಳು ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ತಕ್ಷಣ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ವಿನಾಕಾರಣ ತೆಗೆದು ಹಾಕಲಾಗಿದೆ:  ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿ ಸರ್ಕಾರ ತಲೆ ತೂರುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕವಾಗಿರುವ ಸಿಂಡಿಕೇಟ್ ಸದಸ್ಯರನ್ನು ವಿನಾಕಾರಣ ತೆಗೆದು ಹಾಕಲಾಗಿದೆ. ಸಿಂಡಿಕೇಟ್ ಸದಸ್ಯರನ್ನು ವಜಾ ಮಾಡಬಾರದು, ವಿಶ್ವವಿದ್ಯಾಲಯದ ಆಡಳಿತದಲ್ಲಿ ಸರ್ಕಾರ ತಲೆ ಹಾಕಬಾರದು ಎಂದು ಆಗ್ರಹಿಸಿದರು. ಸರ್ಕಾರಿ ಪಿಯು ಮತ್ತು ಪದವಿ ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ಉಪನ್ಯಾಸಕರನ್ನು ಆದಷ್ಟು ಬೇಗ ಭರ್ತಿ ಮಾಡಿ, ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಇಲ್ಲಿನ ಮಹಿಳಾ ವಿದ್ಯಾಪೀಠದಿಂದ ಆರಂಭವಾದ ವಿದ್ಯಾರ್ಥಿಗಳ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಸಾಗಿ ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement