ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಲೇವಿ ಪದ್ಧತಿ ನಿಷೇಧಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ

Vishwanath S
Updated On : 29 Jun 2013, 1:14 am

ಹುಬ್ಬಳ್ಳಿ: ಪಡಿತರ ಅಕ್ಕಿ ವಿತರಣೆಗೆ ರೈತ ವಿರೋಧಿ ಲೇವಿ ಪದ್ಧತಿ ಜಾರಿಗೆ ತರುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯದಿದ್ದಲ್ಲಿ ರೈತರೊಂದಿಗೆ ಸೇರಿ ರಾಜ್ಯದ್ಯಂತ ಹೋರಾಡುವುದಾಗಿ ಬಿಜೆಪಿ ಎಚ್ಚರಿಸಿದೆ.
ರೈತ ವಿರೋಧಿ ಈ ಪದ್ಧತಿಯನ್ನು ವಿರೋಧಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಈ ಪದ್ಧತಿ ಜಾರಿಗೊಳಿಸಲು ಮುಂದಾಗುವ ಮೂಲಕ ರೈತರಿಗೆ ಅನ್ಯಾಯವೆಸಗಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಪ್ರಹ್ಲಾದ ಜೋಶಿ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಜೂ. 1ರಿಂದ 1ಕ್ಕೆ 1ಕೆ.ಜಿ ಅಕ್ಕಿ ವಿತರಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದರು. ಆದರೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ವಿತರಿಸಲು ನಿರಾಕರಿಸಿದ್ದರಿಂದ ಈ ಲೇವಿ ಪದ್ಧತಿ ಜಾರಿಗೆ ತರಲು ನಿರ್ಧರಿಸಿದ್ದಾರೆ. ಲೇವಿ ಪದ್ಧತಿ ಜಾರಿಗೊಳಿಸುವ ನಿರ್ಧಾರ ಬಿಟ್ಟು, ರಾಜ್ಯ ಸರ್ಕಾರ ಜು.10ರಿಂದ ಪಡಿತರ ಮೂಲಕ 1ಕ್ಕೆ 1 ಕೆ.ಜಿ.ಯಂತೆ ಅಕ್ಕಿ ವಿತರಿಸಬೇಕೆಂದರು.
ಚಿಲ್ಲರೆ ವ್ಯಾಪಾರಿಗಳು ಬೀದಿಗೆ: ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ನೀಡುವ ಕೇಂದ್ರ ಸರ್ಕಾರದ ಕ್ರಮದಿಂದ ದೇಶದಲ್ಲಿರುವ ಚಿಲ್ಲರೆ ವ್ಯಾಪಾರಿಗಳು ಬೀದಿಗೆ ಬರಬೇಕಾಗುತ್ತದೆ. ದೇಶದ ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಶೇ.14ರಷ್ಟು ಪಾಲು ಚಿಲ್ಲರೆ ವ್ಯಾಪಾರಿಗಳದ್ದಾಗಿದೆ. ದೇಶದ 5 ಕೋಟಿ ಜನರು ಚಿಲ್ಲರೆ ವ್ಯಾಪಾರವನ್ನೇ ಅವಲಂಬಿಸಿದ್ದಾರೆ ಎಂದರು.
ರಾಜ್ಯದ ಎಲ್ಲ ವಿವಿಗಳ ರಿಜಿಸ್ಟಾರ್‌ಗಳ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಈಗಾಗಲೇ ವಿವಿಯ ಸಿಂಡಿಕೇಟ್ ಸದಸ್ಯರನ್ನು ವಜಾಗೊಳಿಸುವ ಮೂಲಕ ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಅನುಸರಿಸುತ್ತಿದೆ. ಆ ಮೂಲಕ ವಿಶ್ವವಿದ್ಯಾಲಯದಲ್ಲಿಯೂ ರಾಜಕೀಯಕ್ಕೆ ಅವಕಾಶ ಮಾಡಿಕೊಟ್ಟಿರುವ ಸರ್ಕಾರದ ಕ್ರಮ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕರಣ ಹೈಕೋರ್ಟನಲ್ಲಿರುವುದನ್ನೇ ನೆಪವನ್ನಾಗಿಟ್ಟುಕೊಂಡು ಇತರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟಿಸದಿರುವ ಸರ್ಕಾರದ ಕ್ರಮ ಸಮರ್ಪಕವಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement