ಕುಂದಗೋಳ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿ ಶ್ರೀಸಾಮಾನ್ಯರನ್ನು ನಿರ್ಲಕ್ಷ್ಯಿಸಿವೆ. ತುತ್ತು ಅನ್ನಕ್ಕೂ ಜನತೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಸಾಲದ ಬಾಧೆಯಿಂದ ಹಳ್ಳಿ ಹಾಗೂ ಪಟ್ಟಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ರಾಷ್ಟ್ರೀಯ ಪಕ್ಷಗಳನ್ನು ಧಿಕ್ಕರಿಸಿ ಜೆಡಿಎಸ್ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಶನಿವಾರ ಮಧ್ಯಾಹ್ನ ಪಟ್ಠಣದ ಬ್ರಹ್ಮಲಿಂಗ ದೇವಸ್ಥಾನದ ಆವರಣದಲ್ಲಿ ಕುಂದಗೋಳ ಪಟ್ಟಣ ಪಂಚಾಯತ್ಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಮತ ಯಾಚಿಸಲು ಏರ್ಪಡಿಸಿದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಾಜಿ ಸಚಿವ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎಂ.ಎಸ್. ಅಕ್ಕಿ ಮಾತನಾಡಿದರು.