ಧಾರವಾಡ

ಆರೋಗ್ಯ ಕೇಂದ್ರ ಮಂಜೂರಾತಿಗೆ ಆಗ್ರಹ

ಧಾರವಾಡ: ತಾಲೂಕಿನ ತಡಕೋಡ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾತಿ ಮಾಡಬೇಕು ಮತ್ತು ಗರಗ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ತಡಕೋಡ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಮಾರು 26 ಸಾವಿರ ಜನರಿಗೆ ಕೇಂದ್ರ ಬಿಂದುವಿನಂತೆ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಇಲ್ಲಿ ನಿತ್ಯ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮತ್ತು ಸೌಲಭ್ಯ ದೊರಕುತ್ತಿಲ್ಲ. ಇದರಿಂದಾಗಿ ರೋಗಿಗಳು ಧಾರವಾಡದಲ್ಲಿರುವ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ಮೋರೆ ಹೋಗಬೇಕಿದ್ದು, ಬಡ ರೋಗಿಗಳಿಗೆ ಕಿರಿಕಿರಿ ವುಂಟಾಗುತ್ತಿದೆ. ಆದ್ದರಿಂದ ಈ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯ ಒದಗಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇನ್ನು ತಡಕೋಡ ಗ್ರಾಮದಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅವಶ್ಯಕತೆಯಿದೆ. ಹೀಗಾಗಿ ಸರ್ಕಾರಕ್ಕೆ ಸಾಕಷ್ಟು ಭಾರಿ ಮನವಿಸಲಾಗಿದೆ. ಸದ್ಯ ಗ್ರಾಮಕ್ಕೆ ವೈದ್ಯರ ಅವಶ್ಯಕತೆಯಿದೆ. ಆದ್ದರಿಂದ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡುವರೆಗೆ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ವಾರಕ್ಕೆ ಮೂರು ದಿನ ತಡಕೋಡ ಗ್ರಾಮದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ಈ ಸಂದರ್ಭ ಗ್ರಾಪಂ ಸದಸ್ಯ ಭೀಮಪ್ಪ ಕಾಸಾಯಿ, ಯು.ಬಿ. ದೇಶಪಾಂಡೆ, ಈರಣ್ಣಾ ಸೊಪ್ಪಿನ, ಎಂ.ಎಫ್. ಮುಗದ ಇದ್ದರು.

ಕೌಶಲ್ಯ ಬೆಳೆಸಿಕೊಳ್ಳಿ: ಚಚಡಿ
ಹುಬ್ಬಳ್ಳಿ:
ನಿರ್ವಹಣಾ ಶಾಸ್ತ್ರ ಅಧ್ಯಯನ ಮಾಡುವ ವಿದ್ಯಾರ್ಥಿಗಳು ವಿವಿಧ ಬಗೆಯ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಡಾ. ಅಶೋಕ ಚಚಡಿ ಹೇಳಿದರು.
ಚೇತನ ಬಿಸಿನೆಸ್ ಸ್ಕೂಲ್‌ನಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ರಾಷ್ಟ್ರಮಟ್ಟದ ನಿರ್ವಹಣಾ ಪಯಣ ಉತ್ಸವವನ್ನು ಶುಕ್ರವಾರ ಬೆಳಗ್ಗೆ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಕ್ರೀಯಾಶೀಲರಾಗಿ ಪಾಲ್ಗೊಳ್ಳುವ ಮೂಲಕ ವಿಚಾರ, ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕೆಂದು ಡಾ. ಚಚಡಿ ಅಭಿಪ್ರಾಯಪಟ್ಟರು.
ಕೃಷಿ ವಿವಿ ಕುಲಪತಿ ಡಾ.ಆರ್.ಆರ್. ಹಂಚಿನಮನಿ, ಸಾರ್ವಜನಿಕ ಬದುಕಿನಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳುವುದಕ್ಕೆ ಉತ್ತಮ ವಾತಾವರಣ ಅವಶ್ಯ. ನಿರ್ವಹಣಾ ಕೌಶಲ್ಯ ಬದುಕಿನ ಎಲ್ಲ ರಂಗದಲ್ಲಿ ಯಶಸ್ವಿಗೆ ಮೂಲವಾಗಿದೆ ಎಂದರು.
ಉದ್ಯಮಿ ಮದನ ದೇಸಾಯಿ ಮಾತನಾಡಿದರು. ಚೇತನ ಬಿಸಿನೆಸ್ ಸ್ಕೂಲ್‌ನ ನಿರ್ದೇಶಕ ಡಾ.ವಿ.ಎಂ. ಕೊರವಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಾಗೂ ಹೊರ ರಾಜ್ಯದ 15 ಮಹಾವಿದ್ಯಾಲಯಗಳಿಂದ 300 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಪ್ರೊ. ಸುಚಿತ್ರಾ ಹೂಲಿ, ಪ್ರೊ. ಸಂತೋಷ ಜವಳಿ, ರಾಜಣ್ಣ ಕೊರವಿ, ಪ್ರೊ. ಜಗದೀಶ ದ್ಯಾವಪ್ಪನವರ್, ಪ್ರೊ. ಮಹೇಶ ದ್ಯಾವಪ್ಪನವರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ