ಇಂದು ವಿಚಾರ ಸಂಕಿರಣ
ಧಾರವಾಡ: ಆಲ್ ಇಂಡಿಯಾ ಲಾಯರ್ಸ್ ಯೂನಿಯನ್, ಹೈಕೋರ್ಟ್ ಸಂಚಾರಿ ಪೀಠ ವಕೀಲರ ಸಂಘ, ಜಿಲ್ಲಾ ವಕೀಲರ ಸಂಘ ಹಾಗೂ ವಿದ್ಯಾವರ್ಧಕ ಸಂಘ ಜಂಟಿಯಾಗಿ ಮಾ. 25ರಂದು ಬೆಳಿಗ್ಗೆ 10.30ಕ್ಕೆ ಸಂವಿಧಾನ, ಸಾಮಾಜಿಕ ನ್ಯಾಯ ಹಾಗೂ ನ್ಯಾಯಾಂಗ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಲಾಯರ್ಸ್ ಯೂನಿಯನ್ ಜಿಲ್ಲಾಧ್ಯಕ್ಷ ಎಸ್.ಎಸ್. ಯಡ್ರಾವಿ, ಮೈಲಿಗಲ್ಲಾಗುವ ಅನೇಕ ತೀರ್ಪು ನೀಡಿದ, ಸಂವಿಧಾನದ ಬಗ್ಗೆ ಅದ್ಭುತ ಪಾಂಡಿತ್ಯ ಹೊಂದಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಹೈಕೋರ್ಟ್ ನ್ಯಾಯಮೂರ್ತಿ ಮೋಹನ ಶಾಂತನಗೌಡರ ಹಾಗೂ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಭಾಗವಹಿಸುತ್ತಾರೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅಧ್ಯಕ್ಷತೆ ವಹಿಸುತ್ತಾರೆಂದು ಯಡ್ರಾವಿ ಹೇಳಿದರು.