ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ನಾಳೆ ರೇಣುಕಾಚಾರ್ಯ ಶ್ರೀಗಳ ಜಯಂತ್ಯುತ್ಸವ

Mainashree
Updated On : 24 Mar 2013, 11:11 am

ನವಲಗುಂದ: ಜಂಗಮ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶಾಂಭವಿ ಮಹಿಳಾ ಮಂಡಳದ ಸಹಯೋಗದಲ್ಲಿ ಮಾ. 25ರಂದು ಪಂಚಗ್ರಹ ಹಿರೇಮಠದಲ್ಲಿ ಜ. ರೇಣುಕಾಚಾರ್ಯರ ಜಯಂತ್ಯುತ್ಸವ ಆಚರಿಸಲಾಗುತ್ತಿದೆ. ಸೋಮವಾರ ಬೆಳಗ್ಗೆ 7 ಗಂಟೆಗೆ ನೀಲಮ್ಮನ ಕೆರೆಯ ಮುಂದೆ ಸಮಾವೇಶಗೊಂಡು ಗಂಗಾಪೂಜೆ ನೆರವೇರಿಸಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಪ್ರಾರಂಭವಾಗುತ್ತದೆ. ಸುಮಂಗಲೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧರ್ಮಸಭೆ ಏರ್ಪಡಿಸಲಾಗಿದ್ದು, ಪಂಚಗ್ರಹ ಹಿರೇಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಸಾನ್ನಿದ್ಯ ವಹಿಸಿ, ಆಶೀವರ್ಚನ ನೀಡಲಿದ್ದಾರೆ. ಮಹಾಪ್ರಸಾದದೊಂದಿಗೆ ಜಯಂತ್ಯುತ್ಸವ ಮಂಗಳಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement