ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ನಾಳೆ ವಿಶೇಷ ಚೇತನ ಮಕ್ಕಳಿಂದ ರಂಗೋತ್ಸವ

Rashmi Kasaragodu
Updated On : 26 Mar 2013, 11:12 am

ಧಾರವಾಡ: ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ರಂಗಾಯಣ ಹುಬ್ಬಳ್ಳಿ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಮಾ. 27ರಂದು ಸಂಜೆ 5.30ಕ್ಕೆ ವಿಶೇಷ ಚೇತನ ಮಕ್ಕಳ ರಂಗೋತ್ಸವ ಹಮ್ಮಿಕೊಂಡಿದೆ ಎಂದು ರಂಗಾಯಣ ನಿರ್ದೇಶಕ ಸುಭಾಸ ನರೇಂದ್ರ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ರಂಗೋತ್ಸವದಲ್ಲಿ ಶ್ರೀ ಆರೂಢ ಅಂಗವಿಕಲ ಸಂಸ್ಥೆ, ಡಾ. ಪಿ.ವಿ. ದತ್ತಿ ರೋಟರಿ ಕಿವುಡ ಮಕ್ಕಳ ಶಾಲೆ, ಅನುಗ್ರಹ ಬುದ್ಧಿಮಾಂದ್ಯ ಮಕ್ಕಳ ಶಾಲೆ ಹಾಗೂ ಎನ್.ಎಲ್.ಇ ಸಂಸ್ಥೆ, ಆರ್.ಎನ್. ಶೆಟ್ಟಿ ರೋಟರಿ ಮಂದಗತಿ ಮಕ್ಕಳ ಶಾಲೆ ವಿದ್ಯಾರ್ಥಿಗಳು ಕಿರು ನಾಟಕ, ಸಮೂಹ ನೃತ್ಯ, ಗಾಯನ ಹಾಗೂ ಪ್ರಹಸನಗಳನ್ನು ಪ್ರದರ್ಶಿಸಲಿದ್ದಾರೆ. ಸಮಾರಂಭವನ್ನು ವೀಣಾ ಅಠವಾಲೆ ಸಂಯೋಜಿಸಲಿದ್ದಾರೆ. ವಿಶೇಷ ಚೇತನ ಮಕ್ಕಳನ್ನು ರಂಗಭೂಮಿ ಚಟುವಟಿಕೆಯಲ್ಲಿ ತೊಡಗಿಸಿಸುವ ನಿಟ್ಟಿನಲ್ಲಿ ವಿಶೇಷ ಚೇತನ ಮಕ್ಕಳ ರಂಗೋತ್ಸವ ಹಮ್ಮಿಕೊಳ್ಳಲಾಗಿದೆ. ಮೂರು ಸಾವಿರ ಮಠದ ಗುರುಸಿದ್ದ ರಾಜಯೋಗೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಪೊಲೀಸ್ ಆಯುಕ್ತ ಬಿ.ಎ. ಪದ್ಮನಯನ ಉದ್ಘಾಟಿಸಲಿದ್ದು, ಡಿಡಿಪಿಐ ಡಾ. ಬಿ.ಕೆ.ಎಸ್. ವರ್ಧನ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ರಂಗ ನಟರಾದ ಶರದ್ ಶೇವಡೆ, ಇಂದಿರಾ ಕದಂ ಹಾಗೂ ನಿಂಗಣ್ಣ ಕುಂಟಿ ಅವರಿಗೆ ರಂಗ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಂಗಾಯಣ ಆಡಳಿತಾಧಿಕಾರಿ ಕೆ.ಎಚ್. ಚನ್ನೂರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement