ಮೂರ್ತಿ ಅನಾವರಣ ಸಮಾರಂಭ
ಧಾರವಾಡ: ಇಲ್ಲಿಯ ಕರ್ನಾಟಕ ಕಲಾ ಕಾಲೇಜು ಹಾಗೂ ಹಾವೇರಿಯ ಡಾ.ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಮಾ. 31ರಂದು ಮಧ್ಯಾಹ್ನ 1ಕ್ಕೆ ಕರ್ನಾಟಕ ಕಲಾ ಕಾಲೇಜು ಆವರಣದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪದ್ಮಶ್ರೀ ಡಾ.ವಿ.ಕೃ. ಗೋಕಾಕರವರ ಪೂರ್ಣ ಪ್ರಮಾಣದ ಮೂರ್ತಿ ಅನಾವರಣ ಸಮಾರಂಭ ಆಯೋಜಿಸಲಾಗಿದೆ. ಬಿಜಾಪುರ ಜ್ಞಾನ ಯೋಗಾಶ್ರವುದ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಮೂರ್ತಿ ಅನಾವರಣಗೊಳಿಸುವರು. ಡಾ.ವಿ.ಕೃ. ಗೋಕಾಕ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಉಪಸ್ಥಿತರಿರುವರು. ಕವಿವಿ. ಕುಲಪತಿ ಡಾ.ಎಚ್.ಬಿ. ವಾಲೀಕಾರ ಅಧ್ಯಕ್ಷತೆ ವಹಿಸುವರು.