ಮದ್ಯಪಾನ, ಮಾರಾಟ ನಿಷೇಧ
ಧಾರವಾಡ: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಯ ಮತದಾನ ಮೇ 5ರಂದು ಹಾಗೂ ಮತಗಳ ಎಣಿಕೆ ಮೇ 8ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ನವಲಗುಂದ, ಕುಂದಗೋಳ, ಧಾರವಾಡ, ಹು-ಧಾ ಪೂರ್ವ, ಹು-ಧಾ ಕೇಂದ್ರ, ಹು-ಧಾ ಪಶ್ಚಿಮ ಹಾಗೂ ಕಲಘಟಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೇ 3ರಂದು ಸಂಜೆ 5ರಿಂದ ಮೇ 5ರ ಸಂಜೆ 5ರ ವರೆಗೆ ಮತ್ತು ಮತಗಳ ಎಣಿಕೆ ದಿನ 8ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರ ವರೆಗೆ ಮದ್ಯ ಶೇಖರಣೆ, ಮದ್ಯ ಮಾರಾಟ, ಮದ್ಯ ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಆ ದಿನಗಳನ್ನು ಶುಷ್ಕ ದಿವಸಗಳೆಂದು ಘೋಷಿಸಿ ಜಿಲ್ಲಾಧಿಕಾರಿ ಸಮೀರ್ ಶುಕ್ಲ ಆದೇಶಿಸಿದ್ದಾರೆ.
ಜಿಲ್ಲಾದ್ಯಂತ ಈ ಅವಧಿಯಲ್ಲಿ ಮದ್ಯದ ಅಂಗಡಿಗಳು, ಬೀಯರ್-ಬಾರ್‌ಗಳು, ಕ್ಲಬ್‌ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು. ಪರಿಸ್ಥಿತಿ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಅವಶ್ಯಕತೆ ಕಂಡು ಬಂದಲ್ಲಿ ಶಾಂತಿ ಪಾಲನೆಗಾಗಿ ಹಾಗೂ ಆದೇಶ ಪರಿಣಾಮಕಾರಿ ಜಾರಿಗೆಗೆ ಅಬಕಾರಿ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.