ಧನಸಹಾಯಕ್ಕೆ ಅರ್ಜಿ ಆಹ್ವಾನ
ಧಾರವಾಡ: ವಿದ್ಯಾಪೋಷಕ ಸಂಸ್ಥೆ 2013-14ನೇ ಸಾಲಿನಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅರ್ಹ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನಿಷ್ಠ 500 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ ಸಂಸ್ಥೆಯ ನರ್ಚರ್ ಮೆರಿಟ್ ಯೋಜನೆಯಲ್ಲಿ ಧನಸಹಾಯ ನೀಡಲಿದೆ. ವಿಜ್ಞಾನ ಅಥವಾ ಡಿಪ್ಲೋಮಾ ಸೇರುವ ವಿದ್ಯಾರ್ಥಿಗಳು ಕನಿಷ್ಠ 532 ಅಂಕ ಪಡೆದಿರಬೇಕು. ವಿದ್ಯಾರ್ಥಿಗಳು ಹಾಗೂ ಪಾಲಕರು ಸಂಸ್ಥೆ ನಿಗದಿಪಡಿಸಿದ ಜಿಲ್ಲೆಗಳಾದ ಧಾರವಾಡ, ಗದಗ, ಬಾಗಲಕೋಟೆ, ಬಿಜಾಪುರ, ಬೆಳಗಾವಿ, ದಾವಣಗೆರೆ, ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡ, ಕಾರವಾರ ಜಿಲ್ಲೆಯವರಾಗಿರಬೇಕು. ಕುಟುಂಬದ ಒಟ್ಟು ವಾರ್ಷಿಕ ಆದಾಯ ರು. 60 ಸಾವಿರಕ್ಕಿಂತ ಕಡಿಮೆ ಇರಬೇಕು. ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. 0836 2747357 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.