ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕವಿವಿ ಯುಪಿಎಲ್ ಮೀಡಿಯಾ ಕಪ್-2013

Vishwanath S
Updated On : 8 May 2013, 3:43 am

ಧಾರವಾಡ: ಇಲ್ಲಿನ ಕವಿವಿ ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಹಮ್ಮಿಕೊಂಡಿದ್ದ ಯುಪಿಎಲ್ ಮೀಡಿಯಾ ಕಪ್-2013 ಕ್ರಿಕೆಟ್ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆದವು.
ಸೋಮವಾರ ನಡೆದ ಸಮಾರೋಪದಲ್ಲಿ ಕವಿವಿ ಹಣಕಾಸು ಅಧಿಕಾರಿ ರಾಜಶ್ರೀ ಹಿರೇಮಠ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿ ಜೀವನದಲ್ಲಿ ತುಂಬ ಅವಶ್ಯಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಚಟುವಟಿಕೆಎಯಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಕ್ರೀಡೆಗಳು ಸಹಾಯಕವಾಗಿವೆ ಎಂದರು.
ಸೋಮವಾರ ಮಧ್ಯಾಹ್ನ ನಡೆದ ಅಂತಿಮ ಪಂದ್ಯದಲ್ಲಿ ಗಣಿತಶಾಸ್ತ್ರ ವಿಭಾಗದ ವಿರುದ್ಧ ಭೌತಶಾಸ್ತ್ರ ವಿಭಾಗವು ರೋಚಕ ಜಯ ಸಾಧಿಸುವ ಮೂಲಕ ಪ್ರಸಕ್ತ ಸಾಲಿನ ಯುಪಿಎಲ್ ಮೀಡಿಯಾ ಕಪ್ ತನ್ನದಾಗಿಸಿಕೊಂಡಿತು.
ಈ ಸಂದರ್ಭದಲ್ಲಿ ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗ ಪ್ರಾಧ್ಯಾಪಕ ಪ್ರೊ.ಪೂರ್ಣಾನಂದ, ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಗೌರವ ಕಾರ್ಯದರ್ಶಿ ಶಿವಾಜಿರಾವ್ ಘಾಟಗೆ,  ವಿಭಾಗದ ಮುಖ್ಯಸ್ಥ ಡಾ. ಎ.ಎಸ್. ಬಾಲಸುಬ್ರಹ್ಮಣ್ಯ ಸ್ವಾಗತಿಸಿದರು. ತುಷಾರ್ ಜೋಶಿ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಸಂಜಯಕುಮಾರ ಮಾಲಗತ್ತಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement