ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಹೊರಟ್ಟಿಯಿಂದಲೇ ಸೋತೆ: ತಮಟಗಾರ ಆರೋಪ

Mainashree
Updated On : 10 May 2013, 12:46 pm

ಧಾರವಾಡ: ಬಸವರಾಜ ಹೊರಟ್ಟಿ ಪಕ್ಷದಲ್ಲಿರುವವರೆಗೂ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಿ ಸೋತ ಇಸ್ಮಾಯಿಲ್ ತಮಟಗಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರಾಗಿ ಈ ಚುನಾವಣೆಯಲ್ಲಿ ಹೊರಟ್ಟಿ ಒಂದು ಬಾರಿಯೂ ಪ್ರಚಾರ ಮಾಡಲು ಕ್ಷೇತ್ರಕ್ಕೆ ಆಗಮಿಸಲಿಲ್ಲ. ಲಿಂಗಾಯತ ಸಮಾಜದ ಮುಖಂಡರಾಗಿರುವ ಅವರು, ತಮ್ಮ ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಕೇವಲ 6 ಸಾವಿರ ಮತಗಳನ್ನು ಹಾಕಿಸಿದ್ದರೆ ಖಂಡಿತವಾಗಿಯೂ ನಾನು ಗೆಲ್ಲುತ್ತಿದ್ದೆ. ಕ್ಷೇತ್ರದಲ್ಲಿನ ಎಲ್ಲ ಅಲ್ಪಸಂಖ್ಯಾತರು, ಕುಮಾರಸ್ವಾಮಿ ಅವರ ಅಭಿಮಾನಿಗಳ ಹಾಗೂ ಪಕ್ಷದ ಕಾರ್ಯಕರ್ತರ ಮತಗಳನ್ನು ನನ್ನ ಶ್ರಮದಿಂದ ಪಡೆಯುವಲ್ಲಿ ಯಶಸ್ವಿಯಾಗಿದ್ದೇನೆ ಎಂದರು.
ಇದೇ ವೇಳೆ ಅವರು ತಮಗೆ ಮತ ಹಾಕಿದವರಿಗೆ ಅಭಿನಂದನೆ ಸಲ್ಲಿಸಿದರು. ಶಹರ ಅಧ್ಯಕ್ಷ ಸುರೇಶ ಹಿರೇಮಠ ತಮ್ಮ ಪಕ್ಷದ ಪರವಾಗಿ ಚುನಾವಣಾ ರಣತಂತ್ರ ರೂಪಿಸುವ ಬದಲು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೂ ನನ್ನ ಸೋಲಿಗೆ ಕಾರಣ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement