ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ
ಹುಬ್ಬಳ್ಳಿ: ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹಿಳೆಯೊಬ್ಬಳು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಸಂಭವಿಸಿದೆ. ನಿರ್ಮಲಾ (ಅಂಕಿತಾ) ಹನುಮಂತಗೌಡ್ರ (21) ಎಂಬುವಳೆ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟೆ. ನಿರ್ಮಲಾಳ ಪ್ರಕರಣ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಸ್ಪಷ್ಟಗೊಂಡಿಲ್ಲ. ಪೊಲೀಸ್ ತನಿಖೆಯಿಂದ ನಿಜಾಂಶ ತಿಳಿದು ಬರಬೇಕಿದೆ. ಸುದ್ದಿ ತಿಳಿಯುತ್ತಿದಂತೆಯೇ ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಆರ್.ಕೆ. ಪಾಟೀಲ ಸಿಬ್ಬಂದಿಯೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಈ ಕುರಿತಂತೆ ಪ್ರರಕರಣ ದಾಖಲಾಗಿದೆ.