ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜನಸಂಪರ್ಕ ಕಾರ್ಯಾಲಯ ಉದ್ಘಾಟನೆ

Mainashree
Updated On : 18 May 2013, 10:56 am

ನವಲಗುಂದ: ಶಾಸಕರಾಗಿ ಆಯ್ಕೆಯಾಗಿರುವ ಜೆಡಿಎಸ್‌ನ ಎನ್.ಎಚ್. ಕೋನರಡ್ಡಿ ಇಲ್ಲಿಯ ತಾಪಂ ಆವರಣದಲ್ಲಿ ಬಸವ ಜಯಂತಿಯಂದು ಜನಸಂಪರ್ಕ ಕಾರ್ಯಾಲಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತ ಪರ ಹೋರಾಟದ ಫಲವಾಗಿ ಕ್ಷೇತ್ರದ ಜನತೆ ನನಗೆ ಆಶೀರ್ವದಿಸಿದ್ದಾರೆ. ಕಾಯಕವೇ ಕೈಲಾಸ ಎಂದು ಹೇಳಿರುವ ಜಗಜ್ಯೋತಿ ಬಸವಣ್ಣನವರ ಜಯಂತ್ಯುತ್ಸವದ ದಿನದಂದೇ ಜೋಡೆತ್ತುಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಲಯವನ್ನು ಉದ್ಘಾಟಿಸಿದ್ದೇನೆ. ಪ್ರತಿ ಎರಡನೇ ಸೋಮವಾರ ಅಣ್ಣಿಗೇರಿ, ಮಂಗಳವಾರ ನವಲಗುಂದ ಹಾಗೂ ಶನಿವಾರ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ವಾರದ ಒಳಗಾಗಿ ಅಧಿಕಾರಿಗಳ ಸಭೆ ಕರೆದು ಸಾರ್ವಜನಿಕರಿಗೆ ತೊಂದರೆಯಾಗದಂತೆ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡುತ್ತೇನೆ. ಎಲ್ಲ ಪಕ್ಷದ ಕಾರ್ಯಕರ್ತರಿಗೂ ಮುಕ್ತ ಅವಕಾಶ ನೀಡಿ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆಂದು ಭರವಸೆ ನೀಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಲೋಕನಾಥ ಹೆಬಸೂರ, ಮಹಿಳಾ ಘಟಕದ ಶಾಂತಾ ಚಿಕ್ಕನರಗುಂದ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement