ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಗೋಹತ್ಯೆ ನಿಷೇಧ: ಸಿಎಂ ಜತೆ ಚರ್ಚೆ

Rashmi Kasaragodu
Updated On : 23 May 2013, 11:56 am

ಕನ್ನಡಪ್ರಭ ವಾರ್ತೆ, ಧಾರವಾಡ, ಮೇ 22
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸುತ್ತೇವೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವೇಶ ತೀರ್ಥ ಶ್ರೀಪಾದರು ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಕಾಯ್ದೆ ಕುರಿತಂತೆ ಯಾವುದೇ ಬಹಿರಂಗ ಹೇಳಿಕೆ ನೀಡಲು ಇಷ್ಟಪಡುವುದಿಲ್ಲ. ಆದರೆ, ಹಿಂದೂಗಳಿಗೆ ಪವಿತ್ರವಾಗಿರುವ ಗೋವಿನ ಹತ್ಯೆ ತಡೆಯುವ ನಿಟ್ಟಿನಲ್ಲಿ ಈ ಕಾಯ್ದೆ ಜಾರಿಗೊಳಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇವೆ. ಬಡವರಿಗಾಗಿ ಅಗ್ಗದ ಮದ್ಯ ಆರಂಭ ಕುರಿತು ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರ ಸರಿಯಲ್ಲ. ಈ ಕುರಿತು ಪರಾಮರ್ಶೆ ನಡೆಸಬೇಕೆಂದು ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement