ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ

Lingaraj Badiger
Updated On : 30 May 2013, 11:31 am

ಹುಬ್ಬಳ್ಳಿ:  ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಆಸಕ್ತ ಯುವಕರಿಂದ ಟೂಲ್ರೂಂ ಮಶಿನಿಸ್ಟ್, ಟೂಲ್ ಆ್ಯಂಡ್ ಡೈ ಟೆಕ್ನ್ನಿಷಿಯನ್ ಮತ್ತು ಸಿಎನ್ಸಿ ಪ್ರೋಗ್ರಾಮಿಂಗ್ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಂದು ವರ್ಷದ ಟೂಲ್ರೂಂ ಮಷಿನಿಸ್ಟ್ ತರಬೇತಿಗೆ ಎಸ್ಸೆಸ್ಸೆಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಟೂಲ್ರೂಂ ಉದ್ಯಮದ ಎಲ್ಲ ಯಂತ್ರೋಪಕರಣಗಳನ್ನು ನಡೆಸುವುದಕ್ಕೆ ಈ ಅವಧಿಯಲ್ಲಿ ತರಬೇತಿ ನೀಡಲಾಗುವುದು. ಅದೇ ರೀತಿ ಎರಡು ವರ್ಷದ ಟೂಲ್ ಆ್ಯಂಡ್ ಡೈ ಮೇಕಿಂಗ್ ತರಬೇತಿಗೆ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಪಾಸಾದ ಅಭ್ಯರ್ಥಿಗಳು ತರಬೇತಿ ಪಡೆಯಬಹುದಾಗಿದ್ದು, ಮೊದಲನೇ ವರ್ಷ ಟೂಲ್ ರೂಂ ಉದ್ಯಮದ ಎಲ್ಲ ಯಂತ್ರೋಪಕರಣಗಳ ತರಬೇತಿ ನೀಡಲಾಗುವುದು ಎರಡನೇ ವರ್ಷದಲ್ಲಿ ಟೂಲ್ ಮತ್ತು ಡೈ ತಯಾರಿಸುವ ತಂತ್ರಜ್ಞಾನ ಕಲಿಸಲಾಗುವುದು. ಹಾಗೂ ಸಿಎನ್ಸಿ ಪ್ರೋಗ್ರಾಮಿಂಗ್ ಮತ್ತು ಅಟೋಕ್ಯಾಡ್ ಕೂಡ ಕಲಿಸಲಾಗುವುದು. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಪಾಸಾದ ಅಭ್ಯರ್ಥಿಗಳು ಈ ತರಬೇತಿಗೆ ಪ್ರವೇಶ ಪಡೆಯಬಹುದು.
ಸಿಎನ್ಸಿ ಪ್ರೋಗ್ರಾಮಿಂಗ್ ಆ್ಯಂಡ್ ಆಪರೇಶನ್ಸ್ ತರಬೇತಿ ಒಂದು ತಿಂಗಳ ಅವಧಿಯದಾಗಿದ್ದು, ಐಟಿಐ, ಡಿಪ್ಲೊಮಾ ಮತ್ತು ಬಿ.ಇ. ಪಾಸಾದ ಮತ್ತು ಓದುತ್ತಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಹರು. ಸಂಜೆ ಪ್ರತ್ಯೇಕವಾಗಿ ತರಬೇತಿ ಲಭ್ಯವಿರುತ್ತದೆ. ಅರ್ಜಿ ಮತ್ತು ಹೆಚ್ಚಿನ ಮಾಹಿತಿಗ್ನೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಇಂಡಸ್ಟ್ರಿಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ-30 (ಮೊ: 9141630318, ದೂ: 0836-2333158) ಇವರಿ ಂದ ಪಡೆದು ಜೂನ್ 12ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ವಸತಿ ನಿಲಯಕ್ಕೆ ಅರ್ಜಿ ಆಹ್ವಾನ:
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಸರ್ಕಾರಿ ಮತ್ತು ಅನುದಾನಿತ ವಿದ್ಯಾರ್ಥಿ ವಸತಿ ನಿಲಯಗಳಿಗೆ ಪ.ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2013-14ನೇ ಶೈಕ್ಷಣಿಕ ವರ್ಷಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕುಂದಗೋಳ ಸರ್ಕಾರಿ ಪ.ಜಾತಿ ಬಾಲಕರ ವಸತಿ ನಿಲಯದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಅನುದಾನಿತ ವಸತಿ ನಿಲಯಗಳಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡಲಾಗುವುದು. ಈ ವಿದ್ಯಾರ್ಥಿ ನಿಲಯಗಳಲ್ಲಿ 5ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಪ. ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಪ್ರವೇಶ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಜೂನ್ 15ರೊಳಗೆ ಕುಂದಗೋಳ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅರ್ಜಿಯೊಂದಿಗೆ 2012-13ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ರಹವಾಸಿ ಪ್ರಮಾಣಪತ್ರ, ಅದಾಯ ಪ್ರಮಾಣ ಪತ್ರ, ಪ್ರವೇಶ ಪಡೆದ ಶಾಲೆಯ ಬಗ್ಗೆ ಸಂಸ್ಥೆಯ ಮುಖ್ಯಸ್ಥರಿಂದ ಅರ್ಜಿಯ ಹಿಂಭಾಗದಲ್ಲಿ ಪ್ರಮಾಣಪತ್ರ ಹಾಗೂ ಎರಡು ಭಾವಚಿತ್ರ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement