ಕೊಳಚೆ ಪ್ರದೇಶದ ಮನೆ ನೋಂದಣಿಗೆ ಒತ್ತಾಯ
ಹುಬ್ಬಳ್ಳಿ: ಕೊಳಚೆ ಪ್ರದೇಶದಲ್ಲಿರುವ ಮನೆಗಳನ್ನು ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸುವಂತೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ನಾಗರಿಕರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಸರ್ಕಾರವನ್ನು ಆಗ್ರಹಿ ಸಿದ್ದಾರೆ.
ಈ ಕುರಿತು ನಗರದಲ್ಲಿ ಗುರುವಾರ ಮುಖ್ಯಮಂತ್ರಿಯವರಿಗೆ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಕಾರ್ಯಕರ್ತರು, ಇದುವರೆಗಿನ ಸರ್ಕಾರಗಳು ಕೊಳಚೆ ಪ್ರದೇಶದ ಅಭಿವೃದ್ಧಿ ಬಗ್ಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮಿತಿ ಅಧ್ಯಕ್ಷ ಸುಭಾಷ ತೆಗ್ಗಿ, ಸುರೇಶ ಹೊಸಮನಿ, ಗುರುನಾಥ ಗೊಂಜಗೋಳ, ಮಲ್ಲಿಕಾರ್ಜುನ ಯಾತಗೇರಿ, ಶಿವು ನಿಡಗುಂದಿ, ಹನೀಫ ಬೇಪಾರಿ ಹಾಜರಿದ್ದರು.