ಜನಪರ ಹೋರಾಟ ಸಮಿತಿ ಕಾರ್ಯಕರ್ತರಿಂದ ಮನವಿ
ಹುಬ್ಬಳ್ಳಿ: ರಾಯನಾಳ, ಅಂಚಟಗೇರಿ ಮತ್ತು ತಡಸಿನಕೊಪ್ಪ ಗ್ರಾಮಗಳಲ್ಲಿರುವ ಸರ್ಕಾರಿ ಬಂಜರು ಭೂಮಿಯನ್ನು ಹುಬ್ಬಳ್ಳಿ ನಗರದ ನಿವೇಶನ ರಹಿತ ಬಡವರಿಗೆ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಜನಪರ ಹೋರಾಟ ಸಮಿತಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ಮಾಡಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.
ಜನಪರ ಹೋರಾಟ ಸಮಿತಿ ಆಶ್ರಯದಲ್ಲಿ ಇಲ್ಲಿನ ಬಂಕಾಪುರ ಚೌಕ್ದಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿದ ನಿವೇಶನರಹಿತರು ಪಿ.ಬಿ. ರಸ್ತೆ, ನ್ಯೂ ಇಂಗ್ಲಿಷ್ ಸ್ಕೂಲ್, ಡಾಕಪ್ಪ ಸರ್ಕಲ್, ದಾಜಿಬಾನ್ ಪೇಟ್, ಚೆನ್ನಮ್ಮ ವೃತ್ತದ ಮುಖಾಂತರ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಗಂಗಾಧರ ಪೆರೂರ ಅವರು, ವಸತಿ ರಹಿತರಿಗೆ ಮನೆ ನಿರ್ಮಿಸಿ ಬಡವರು ನೆಮ್ಮದಿಯ ಬದುಕು ಸಾಗಿಸುವಂತೆ ಸರ್ಕಾರ ಅನುಕೂಲ ಮಾಡಿಕೊಡಬೇಕು ಎಂದರು.