ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಬಿಸಿಯಾದ ಕುಡಿಯುವ ನೀರಿನ ಚರ್ಚೆ

Lingaraj Badiger
Updated On : 31 May 2013, 12:22 pm

ಕನ್ನಡಪ್ರಭ ವಾರ್ತೆ, ಧಾರವಾಡ, ಮೇ 30
ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಮಂಗಳವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆ ಉಂಟಾಯಿತು. ಅಧಿಕಾರಿಗಳು ನೀರಿನ ಸಮಸ್ಯೆ ಇದ್ದ ಪ್ರದೇಶಗಳಲ್ಲಿ ಬೋರ್‌ವೆಲ್ ಕೊರೆಯಿಸುವುದನ್ನು ಬಿಟ್ಟು, ತಮಗೆ ಬೇಕಾದಲ್ಲಿ ಕೊರೆಯಿಸುತ್ತಿದ್ದಾರೆಂದು ತಾಪಂ ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ತಾಲೂಕಿನ ಅಮ್ಮಿನಬಾವಿ ಶಾಲೆಯ ಮಕ್ಕಳಿಗೆ ಕುಡಿಯಲು ನೀರು ಇಲ್ಲದಂತಾಗಿದೆ. ಈ ಕುರಿತು ಕಳೆದ ಒಂದು ವರ್ಷದ ಹಿಂದೆಯೇ ಬೋರವೆಲ್ ಹಾಕಲು ಮನವಿ ಮಾಡಲಾಗಿತ್ತು. ಇಲ್ಲಿಯವರೆಗೂ ಈ ಕಾರ್ಯ ಪೂರ್ಣಗೊಳಿಸಿಲ್ಲ. ಸದ್ಯ ಶಾಲೆಗಳು ಪ್ರಾರಂಭಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳು ಕುಡಿಯಲು ನೀರಿಲ್ಲದೇ ಪರದಾಡುವ ಪರಿಸ್ಥಿತಿ ಬರುತ್ತದೆ ಎಂದು ಸದಸ್ಯರೊಬ್ಬರು ದೂರು ಸಲ್ಲಿಸಿದರು.
ಕೊಳವೆ ಬಾವಿ ಕೊರೆಯಿಸಿ: ಇದಕ್ಕೆ ಉತ್ತರಿಸಿದ ನೀರಾವರಿ ಇಲಾಖೆ ಎಂಜಿನಿಯರ್ ಅಕ್ಕೂರ, ಗ್ರಾಮೀಣ ಭಾಗದಲ್ಲಿ ಹಲವಾರು ಕಡೆಗಳಲ್ಲಿ ಬೋರ್‌ವೆಲ್ ತೆಗೆಯಲಾಗಿದೆ. ಅಲ್ಲದೇ ಅನುದಾನ ಕಡಿಮೆ ಇರುವುದರಿಂದ ಅವುಗಳಿಗೆ ಯಂತ್ರ ಹಾಗೂ ಪೈಪ್‌ಲೈನ್ ಕಲ್ಪಿಸಿಲ್ಲ. ಶೀಘ್ರ ಕುಡಿಯುವ ನೀರಿನ ಸಮಸ್ಯೆ ಇದ್ದ ಪ್ರದೇಶಗಳಲ್ಲಿ ಕೊಳವೆ ಬಾವಿ ಕೊರೆಯಿಸುತ್ತೇವೆಂದು ಉತ್ತರಿಸಿದರು. ಕವಲಗೇರಿಯಲ್ಲಿ ರು. 5 ಲಕ್ಷದ ಕಾಮಗಾರಿ ಪೂರ್ಣಗೊಂಡಿದೆ ಎಂದು ನಡಾವಳಿಯಲ್ಲಿ ತೋರಿಸಲಾಗಿದೆ. ಆದರೆ, ಅಲ್ಲಿ ಯಾವುದೇ ರೀತಿಯ ಕಾರ್ಯಗಳು ಆಗಿಲ್ಲ ಎಂಬ ಆರೋಪಗಳು ಸಭೆಯಲ್ಲಿ ಕೇಳಿ ಬಂದವು. ತಲವಾಯಿ, ಕವಲಗೇರಿ ಸೇರಿದಂತೆ ಮುಂತಾದ ಕಡೆಗಳಲ್ಲಿ ಹಾಕಿರುವ ಕೊಳವೆ ಬಾವಿಗಳು ಆರಂಭವಾಗಿಲ್ಲ. ಆದರೆ, ನಡಾವಳಿಯಲ್ಲಿ ಮಾತ್ರ ಕಾರ್ಯಗಳು ಪೂರ್ಣಗೊಂಡಿವೆ ಎಂದು ತೋರಿಸಲಾಗಿದೆ ಎಂದು ತಾಪಂ ಸದಸ್ಯ ಯೋಗೀಶಗೌಡ ಗೌಡರ ಪ್ರಶ್ನಿಸಿದರು. ಈ ಪ್ರಶ್ನೆಗೆ ಅಧಿಕಾರಿಗಳಲ್ಲಿ ಸ್ಪಷ್ಟ ಉತ್ತರ ಇರಲಿಲ್ಲ.
ಸಭೆಯಲ್ಲಿ ತಾಪಂ ಅಧ್ಯಕ್ಷೆ ಸುಮಂಗಲಾ ಕೌದೆಣ್ಣವರ, ಉಪಾಧ್ಯಕ್ಷ ಈರಪ್ಪ ಕರಲಿಂಗಣ್ಣವರ, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಾ ಕೊಳ್ಳಾನಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement