ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಚಳಿಗಾಲದ ಅಧಿವೇಶನದಲ್ಲಿ ಸರ್ವ ಪಕ್ಷಗಳ ಸಭೆ

Lingaraj Badiger
Updated On : 14 Nov 2013, 11:05 am

ಧಾರವಾಡ: ಕಾನೂನು ಹಾಗೂ ತಾಂತ್ರಿಕ ತೊಡಕುಗಳ ಕಾರಣಗಳಿಂದ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ನಾಲಾ ಜೋಡಣೆ ವಿಚಾರವಾಗಿ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರ್ವ ಪಕ್ಷಗಳ ಸಭೆ ಕರೆಯುವುದಾಗಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
ಯೋಜನೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲಪ್ರಭಾ ಅಚ್ಚುಕಟ್ಟು ಜನಪ್ರತಿನಿಧಿಗಳು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಗೂ ರೈತರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನೆಲ, ಜಲ, ಸಂಸ್ಕೃತಿ ವಿಚಾರದಲ್ಲಿ ರಾಜಕೀಯ ಬೇಡ, ಎಲ್ಲರೂ ಒಗ್ಗಟ್ಟಾಗಿ ನಮ್ಮ ಹಕ್ಕನ್ನು ಪಡೆಯೋಣ.
ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಯೋಜನೆ ಶೀಘ್ರ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗಂಭೀರವಾಗಿ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ಯೋಜನೆಗೆ ರಾಜ್ಯ ಸರ್ಕಾರವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ತೊಡಕಾಗಿಲ್ಲ. ಬದಲಾಗಿ ಮೂರನೇ ವ್ಯಕ್ತಿಯಾಗಿ ಗೋವಾ ಸರ್ಕಾರ ಕಾನೂನು ತೊಡಕನ್ನು ನಮ್ಮ ಮುಂದಿಟ್ಟಿದ್ದು, ನಾವು ಸಮರ್ಥವಾಗಿ ವಾದ ಮಂಡಿಸುವ ಮೂಲಕ ನೀರು ಪಡೆಯುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿಯೊಂದಿಗೆ ಸಂಘಟನೆಗಳು, ಜನಪ್ರತಿನಿಧಿಗಳು ಸರ್ಕಾರದೊಂದಿಗೆ ಸಹಕರಿಸಬೇಕು.
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನತೆಗೆ ನೀರಿನ ಬವಣೆ ಸಾಕಷ್ಟಿದ್ದು, ಈ ಮೂಲಕ ಯೋಜನೆ ಅನುಷ್ಠಾನಕ್ಕೆ ಸರ್ಕಾರದಿಂದ ಶತಪ್ರಯತ್ನ ಮಾಡುವುದಾಗಿ ಸಚಿವರು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement