ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಅವಹೇಳನಕಾರಿ ಹೇಳಿಕೆ ನೀಡಿದ ಸ್ವಾಮೀಜಿ ವಿರುದ್ಧ ಕಾನೂನು ಹೋರಾಟ: ತಮಟಗಾರ

Lingaraj Badiger
Updated On : 16 Nov 2013, 11:53 am

ಧಾರವಾಡ: ಒಂದು ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತೆ ಹೇಳಿಕೆ ನೀಡಿರುವ ಹಿಂದೂ ಮಹಾಸಭಾ ಗೌರವಾಧ್ಯಕ್ಷ ಪ್ರಣವಾನಂದ ಸ್ವಾಮೀಜಿ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದು ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮಾಡಿದ ಯೋಜನೆಗೆ ಸರ್ಕಾರ ಹೊಣೆ. ಅದನ್ನು ಬಿಟ್ಟು ಸ್ವಾಮೀಜಿ ಧಾರ್ಮಿಕ ವಿಷಯದಲ್ಲಿ ಈ ರೀತಿ ಮಾಧ್ಯಮದ ಎದುರು ಹೇಳಿಕೆ ನೀಡಿದ್ದು ಸರಿಯಲ್ಲ. ಪ್ರತಿ ಜಿಲ್ಲೆಯಲ್ಲಿ ಐದು ಸಾವಿರ ಹಿಂದೂ ಯುವಕರಿಗೆ ಮುಸ್ಲಿಂ ಯುವತಿಯರನ್ನು ಮದುವೆ ಮಾಡಿಸುವುದೇ ನನ್ನ ಗುರಿ ಎಂದು ಹೇಳಿರುವುದು ಎಷ್ಟರಮಟ್ಟಿಗೆ ಸರಿ ಎಂದು ತಮಟಗಾರ ಬೇಸರ ವ್ಯಕ್ತಪಡಿಸಿದರು.
ಭಾರತ ದೇಶದ ಪ್ರತಿಯೊಂದು ಮಹಿಳೆಯು ಗೌರವಕ್ಕೆ ಪಾತ್ರಳಾಗಿದ್ದು, ಯಾವುದೇ ಸಮುದಾಯ ಮಹಿಳೆಗೆ ಗೌರವ ನೀಡುವುದು ಅದರ ಕರ್ತವ್ಯ. ಆದರೆ, ಶಾದಿಭಾಗ್ಯ ಯೋಜನೆ ವಿಸ್ತರಣೆಗೊಳಿಸಲು ಹೋರಾಟದಲ್ಲಿ ಮುಸ್ಲಿಂ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಅಗೌರವ ತೋರಿರುವ ಸ್ವಾಮೀಜಿ ನಡೆ ಸಮಾಜದ ಜನರ ಮನಸ್ಸಿಗೆ ನೋವಾಗಿದೆ. ಆದ್ದರಿಂದ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಸ್ವಾಮೀಜಿಯನ್ನು ಕೂಡಲೇ ಬಂಧಿಸಬೇಕೆಂದು ತಮಟಗಾರ ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement