ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಡಿ. 12ರಂದು ಸಂಸತ್ತಿಗೆ ಮುತ್ತಿಗೆ: ಶಾಂತಕುಮಾರ

Lingaraj Badiger
Updated On : 16 Nov 2013, 11:54 am

ಧಾರವಾಡ: ಕಬ್ಬಿಗೆ ಬೆಲೆ ನಿಗದಿ ನಿಗದಿಗೆ ಸಂಬಂಧಿಸಿದಂತೆ ಶೀಘ್ರ ತೀರ್ಮಾನ ತೆಗೆದುಕೊಳ್ಳದಿದ್ದಲ್ಲಿ ಡಿ. 12ರಂದು ಐದು ಲಕ್ಷ ರೈತರೊಂದಿಗೆ ಸಂಸತ್ತಿಗೆ ಮುತ್ತಿಗೆ ಹಾಕಲಾಗುವುದು ಎಂದು  ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರ ಶಾಂತಕುಮಾರ ಎಂದು ಎಚ್ಚರಿಸಿದ್ದಾರೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಬ್ಬು ಬೆಳೆಯುವ ಪ್ರದೇಶ ಕಡಿಮೆಯಾಗಿದೆ. ಆದರೂ ಸರ್ಕಾರ ಕಬ್ಬಿಗೆ ಉತ್ತಮ ಬೆಲೆ ನಿಗದಿಪಡಿಸುತ್ತಿಲ್ಲ. ಬೆಲೆ ನಿಗದಿ ಮಾಡಬೇಕಿರುವ ಸಕ್ಕರೆ ಕಾರ್ಖಾನೆ ಮಾಲೀಕರು ಈ ನಿಟ್ಟಿನಲ್ಲಿ ಚಿಂತನೆ ಮಾಡುತ್ತಿಲ್ಲ. ಕಬ್ಬಿನ ಇಳುವರಿ ಮತ್ತು ಉತ್ಪನ್ನಗಳನ್ನು ಪರಿಗಣಿಸಿ ಕಬ್ಬಿನ ಬೆಲೆ ಪುನರ್‌ನಿಗದಿಪಡಿಸಬೇಕು ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಬ್ಬಿಗೆ ಒಂದೇ ಬೆಲೆ ನಿಗದಿ ಪಡಿಸಬೇಕು. ಅಲ್ಲದೆ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಿರುವ ಸುಮಾರು ರು. 800 ಕೋಟಿ ಬಾಕಿ ಹಣವನ್ನು ಸರ್ಕಾರ ವಸೂಲಿ ಮಾಡಿ ರೈತರಿಗೆ ಪಾವತಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಪಟೇಲ್, ನಿಜಗುಣ ಕೆಲಗೇರಿ, ಎಂ.ವಿ. ಗಾಡಿ, ವಿಠಲ ಗಣಾಚಾರಿ, ಜಗದೀಶ ಪಾಟೀಲ, ಬಾಬು ಉಪಾಸಿ, ದೇವು ಕುಮಾರ ಇದ್ದರು.
ಪ್ರವಾಸ ಭಾಗ್ಯಕ್ಕೆ ಬಿಜೆಪಿ ವಿರೋಧ
ಹುಬ್ಬಳ್ಳಿ: ಅಹಿಂದ ಸಮುದಾಯದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸರ್ಕಾರ ಘೋಷಿಸಿರುವ ಪ್ರವಾಸ ಭಾಗ್ಯ ಯೋಜನೆ ವಿರೋಧಿಸಿ ಶುಕ್ರವಾರ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಲ್ಯಾಮಿಂಗ್ಟನ್ ಹೈಸ್ಕೂಲ್ ಎದುರು ಪ್ರತಿಭಟಿಸಿದರು. ವಿದ್ಯಾರ್ಥಿಗಳ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಕೆಲವೇ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರವಾಸ ಭಾಗ್ಯ ಯೋಜನೆ ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ. ಸೀಮಿತ ವರ್ಗಗಳಿಗೆ ಸರ್ಕಾರಿ ಸೌಲಭ್ಯ ಇನ್ನುಳಿದವರನ್ನು ಸರ್ಕಾರಿ ಸೌಲಭ್ಯಗಳಿಂದ ವಂಚಿಸುವ ಯೋಜನೆ ವಿರುದ್ಧ ರಾಜ್ಯಾದ್ಯಂತ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಾಜೀವ ಜರತಾರಘರ್ ಮಾತನಾಡಿದರು. ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ, ಮಹೇಶ ಟೆಂಗಿನಕಾಯಿ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement