ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ನಗರೋತ್ಥಾನ ಕಾಮಗಾರಿ ಪರಿಶೀಲನೆ

Lingaraj Badiger
Updated On : 16 Nov 2013, 11:54 am

ಧಾರವಾಡ: ನಗರೋತ್ಥಾನ ಯೋಜನೆಯಡಿ ಹು-ಧಾ ಅವಳಿ ನಗರಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಶುಕ್ರವಾರ  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪರಿಶೀಲಿಸಿದರು.
ಕಳೆದ 15 ದಿನಗಳ ಹಿಂದೆ ಜರುಗಿದ ಸಭೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನೀಡಿರುವ ಸೂಚನೆಗಳು ಅನುಷ್ಠಾನಗೊಂಡಿರುವುದನ್ನು ಸಭೆಯಲ್ಲಿ ಪರಿಶೀಲಿಸಿದರು. ಅಧಿಕಾರಿಗಳು ಸಿದ್ಧಗೊಳಿಸಿದ ರಸ್ತೆ ಕಾಮಗಾರಿಗಳ ಪಟ್ಟಿ ಪರಿಶೀಲಿಸಿ, ರಸ್ತೆ ಕಾಮಗಾರಿಗಳನ್ನು ಆದ್ಯತಾನುಸಾರ ಪಟ್ಟಿ ಮಾಡಬೇಕೆಂದು ಸೂಚಿಸಿದರು. ಅವಳಿ ನಗರಗಳ ಮೂರು ಕಾಮಗಾರಿ ವಿಭಾಗಗಳಲ್ಲಿ 22 ಕಿ.ಮೀ. ನಷ್ಟು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ತುರ್ತು ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು. ನ. 16ರಂದು ಹುಬ್ಬಳ್ಳಿ ಹಾಗೂ ಭಾನುವಾರ ಧಾರವಾಡದಲ್ಲಿ ಆಯಾ ಕ್ಷೇತ್ರದ ಶಾಸಕರೊಂದಿಗೆ ರಸ್ತೆಗಳ ಸ್ಥಿತಿಗತಿಯನ್ನು ಖುದ್ದಾಗಿ ಪರಿಶೀಲಿಸುತ್ತೇನೆಂದು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಮೀರ್ ಶುಕ್ಲ, ಪಾಲಿಕೆ ಜಂಟಿ ಆಯುಕ್ತ ವೀರೇಂದ್ರ ಕುಂದಗೋಳ, ಅಧೀಕ್ಷಕ ಅಭಿಯಂತ ಗರಗ, ಜಿಲ್ಲಾ ನಗರಾಭಿನವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಆಯೇಶಾ ಪರ್ವಿನ್ ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement