ಭಗೀರಥ ಜನಜಾಗೃತಿ ಜಾಥಾಕ್ಕೆ ಚಾಲನೆ
ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ನಡೆಯುತ್ತಿರುವ ಭಗೀರಥ ಜನಜಾಗೃತಿ ಜಾಥಾಕ್ಕೆ ಮಂಗಳವಾರ ನವನಗರದಲ್ಲಿ ಚಾಲನೆ ನೀಡಲಾಯಿತು.
ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಜ್ಜಪ್ಪ ಹೋರಕೇರಿ ಜಾಗೃತಿ ಜಾಥಾ ಬರಮಾಡಿಕೊಂಡರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಚಾಲನೆ ನೀಡಿ ಮಾತನಾಡಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಹೊರಕೇರಿ, ಶಿವು ಹಿರೇಮಠ, ರಾಜು ಅಂಭೋರೆ, ಎಪಿಎಂಸಿ ಅಧ್ಯಕ್ಷ ಸುರೇಶ ದಾಸನೂರ, ವಿಕಾಸ ಸೊಪ್ಪಿನ, ಮಹೇಶ ಪತ್ತಾರ, ಡಾ. ಲಿಂಗರಾಜ ಅಂಗಡಿ, ಹನಮಂತಸಾ ನಿರಂಜನ, ಶೋಭಾ ಚಲವಾದಿ, ಎಂ.ಬಿ. ಕಟ್ಟಿ. ಕೆ.ಎಚ್. ಪಾಟೀಲ ಉಪಸ್ಥಿತರಿದ್ದರು.