ರೈತರಿಗೆ ತಾಂತ್ರಿಕ ಮಾಹಿತಿ ನೀಡಿ
ಕನ್ನಡಪ್ರಭ ವಾರ್ತೆ, ಧಾರವಾಡ, ನ. 19
ವಿದ್ಯುನ್ಮಾನ ಮಾಧ್ಯಮದ ಮೂಲಕ ರೈತರಿಗೆ ತಾಂತ್ರಿಕ ಮಾಹಿತಿ ನೀಡಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಜೆ.ಎಚ್ . ಕುಲಕರ್ಣಿ ಹೇಳಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯ, ಮತ್ತು ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕೃಷಿ ಇಲಾಖೆಯ ಕ್ಷೇತ್ರ ಮಟ್ಟದ ವಿಸ್ತರಣಾ ಅಧಿಕಾರಿಗಳಿಗೆ ಸೋಮವಾರದಿಂದ ಹಮ್ಮಿಕೊಂಡಿದ್ದ 7 ದಿನಗಳ ಬುನಾದಿ ತರಬೇತಿ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ತಾಂತ್ರಿಕತೆಗಳ ಬಗ್ಗೆ, ಸೂಕ್ಷ್ಮ ಪೋಷಕಾಂಶಗಳ ಬಳಕೆ ಬಗ್ಗೆ ಹೆಚ್ಚಿನ ತರಬೇತಿಯ ಅವಶ್ಯಕತೆ ಇದೆ ಇಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿಸ್ತರಣಾ ನಿರ್ದೇಶಕ ಡಾ. ಎಂ.ಬಿ. ಚೆಟ್ಟಿ ಮಾತನಾಡಿ, 2014ರ ಮಾರ್ಚ್ 16ರವರೆಗೆ 690 ಅಧಿಕಾರಿಗಳಿಗೆ ಒಟ್ಟು 20 ಸರಣಿ ತರಬೇತಿಗಳನ್ನು ಆಯೋಜಿಸಲಾಗಿದೆ ಎಂದರು. ಡಾ. ಎಸ್.ಟಿ. ನಾಯಕ್ ಸ್ವಾಗತಿಸಿದರು. ಡಾ. ಎಸ್.ಡಿ. ಕೋಲೋಳಗಿ ನಿರೂಪಿಸಿದರು. ಡಾ. ಪಿ. ಎಸ್. ಹೂಗಾರ ವಂದಿಸಿದರು.