ಜಿಮಖಾನಾ ಕ್ಲಬ್ಗೆ ಶೆಟ್ಟರ್, ಪ್ರಹ್ಲಾದ ಜೋಶಿ ರಾಜಿನಾಮೆ
ಹುಬ್ಬಳ್ಳಿ: ಹುಬ್ಬಳ್ಳಿ ಜಿಮಖಾನಾ ಕ್ಲಬ್ನ ಗೌರವಾಧ್ಯಕ್ಷ ಮತ್ತು ಮತ್ತು ಗೌರವ ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮತ್ತು ಸಂಸದ ಪ್ರಹ್ಲಾದ ಜೋಶಿ ಕೊನೆಗೂ ರಾಜಿನಾಮೆ ಸಲ್ಲಿಸಿದ್ದಾರೆ.
ಜಿಮಖಾನಾ ಕ್ಲಬ್ನ ಸರ್ವ ಸದಸ್ಯರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಸಂಸದ ಪ್ರಹ್ಲಾದ ಜೋಷಿ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ಇದೇ ಸಭೆಯಲ್ಲಿ ಗೌರವ ಅಧ್ಯಕ್ಷ ಮತ್ತು ಗೌರವ ಉಪಾಧ್ಯಕ್ಷ ಸ್ಥಾನಕ್ಕೆ ಪ್ರೊ. ಸಿ.ಸಿ. ದಿಕ್ಷಿತ್ ಮತ್ತು ಡಾ. ಸಿ.ಎಸ್. ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮತ್ತು ಸಂಸದ ಪ್ರಹ್ಲಾದ ಜೋಶಿ ಅವರ ರಾಜಿನಾಮೆಗೆ ಆಗ್ರಹಿಸಿ ಗ್ರೌಂಡ್ ಬಚಾವೋ ಸಮಿತಿ ಕಾರ್ಯಕರ್ತರು ನಾಡೋಜ ಪಾಟೀಲ ಪುಟ್ಟಪ್ಪ ಅವರ ನೇತೃತ್ವದಲ್ಲಿ ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಇವರಿಬ್ಬರು ರಾಜಿನಾಮೆ ನೀಡಿದ್ದಾರೆ.
ರಾಜೀನಾಮೆ ನಾಟಕ: ಜಿಮಖಾನಾ ಕ್ಲಬ್ನ ಗೌರವಾಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮತ್ತು ಪ್ರಹ್ಲಾದ ಜೋಶಿ ಅವರು ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದು ನಾಟಕ ಎಂದು ಗ್ರೌಂಡ್ ಬಚಾವೋ ಸಮಿತಿ ಆರೋಪಿಸಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆ ಆಗಬಾರದು ಎನ್ನುವ ಉದ್ದೇಶದಿಂದ ರಾಜೀನಾಮೆ ನೀಡಿ ಕ್ಲಬ್ನಿಂದ ದೂರ ಸರಿಯುತ್ತಿದ್ದಾರೆ ಎಂದು ಗ್ರೌಂಡ್ ಬಚಾವೋ ಸಮಿತಿ ಅಧ್ಯಕ್ಷ ಸಿಬಿಎಲ್ ಹೆಗ್ಡೆ, ವೆಂಕಟೇಶ ಸವದತ್ತಿ, ಕರವೇ ಅಧ್ಯಕ್ಷ ಅಮೃತ ಇಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.