ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸಿ.ಎಸ್. ಪಾಟೀಲ ನೇಮಕ

Lingaraj Badiger
Updated On : 28 Nov 2013, 11:03 am

ನವಲಗುಂದ: ತಾಲೂಕಿನ ಅಡ್ನೂರ ಗ್ರಾಮದ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಸಿ.ಎಸ್. ಪಾಟೀಲ ಅವರನ್ನು ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಎಂ.ಪಿ. ನಾಗರಾಜ ಉಚ್ಚ ನ್ಯಾಯಾಲಯದ ಧಾರವಾಡ ಖಾಯಂ ಪೀಠದ ಅಡ್ವೋಕೇಟ್ ಜನರಲ್ ಕಚೇರಿಯ ಸರ್ಕಾರಿ ವಕೀಲರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ಎರಡು ವರ್ಷಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಸಿ.ಎಸ್. ಪಾಟೀಲ ವಕೀಲರು ಸರ್ಕಾರಿ ವಕೀಲರಾಗಿ ಮುಂದುವರೆಯಲಿದ್ದಾರೆ.
ತೀರ್ಪು ಸ್ವಾಗತಾರ್ಹ
ಹುಬ್ಬಳ್ಳಿ: ಕೊಲೆ ಆರೋಪದಿಂದ ಜಯೇಂದ್ರ ಸರಸ್ವತಿ ಸ್ವಾಮೀಜಿ ಹಾಗೂ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅವರನ್ನು ದೋಷಮುಕ್ತಗೊಳಿಸಿ ಪುದುಚರಿಯ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದ್ದನ್ನು ಶ್ರೀರಾಮಸೇನಾ ಸ್ವಾಗತಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸೇನಾದ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್, ತೀರ್ಪಿನಿಂದ ಹಿಂದೂ ಸ್ವಾಮೀಜಿಗಳ ಹಾಗೂ ಸಾಧುಗಳನ್ನು ಅಪಪ್ರಚಾರ ಮಾಡುತ್ತಿರುವವರ ಬಣ್ಣ ಬಯಲಾಗಿದೆ ಎಂದಿದ್ದಾರೆ. ಜಯೇಂದ್ರ ಸರಸ್ವತಿ ಶಂಕರ ಪೀಠದ ಹಿರಿಯ ಶ್ರೀಗಳಾಗಿದ್ದಾರಲ್ಲದೇ ಹಿಂದೂ ಸಮಾಜದ ಬಗ್ಗೆ ಅಪಾರ ಕಳಕಳಿ ಹೊಂದಿದ್ದಾರೆ. ಅಯೋಧ್ಯಾ ರಾಮಮಂದಿರ ಹೋರಾಟ, ಮಂತಾತರ, ಅಸ್ಪೃಶ್ಯತೆ ವಿರುದ್ಧ ಹೋರಾಟ ಮಾಡಿದ್ದಾರೆ ಎಂದೂ ಮುತಾಲಿಕ್ ತಿಳಿಸಿದ್ದಾರೆ.
ಇಂದು ಪ್ರತಿಭಟನೆ
ಧಾರವಾಡ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನ. 28ರಂದು ಪ್ರತಿಭಟನೆ ನಡೆಸಲಾಗುವುದು. ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸಲಿರುವ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಮೌಳಿ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಕಾರ್ತಿಕೋತ್ಸವ
ಕುಂದಗೋಳ: ತಾಲೂಕಿನ ಗುಡಗೇರಿ ಗ್ರಾಮದ ಗ್ರಾಮದೇವಿ ದ್ಯಾಮವ್ವಳ ಗುಡಿ ಆವರಣದಲ್ಲಿ ನ. 29ರಂದು ಸಂಜೆ 6ಕ್ಕೆ 6ನೇ ವರ್ಷದ ಕಾರ್ತಿಕೋತ್ಸವ  ಏರ್ಪಡಿಸಲಾಗಿದೆ. ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚಿತ ಕಾರ್ಯಾಗಾರ
ಧಾರವಾಡ: ಕರ್ನಾಟಕ ಕ್ಲಾಸಿಕ್ ಎಜ್ಯುಕೇಶನ್‌ನ ದಿ ಕ್ಲಾಸಿಕ್ ಕೆಎಎಸ್, ಐಎಎಸ್ ಸ್ಟಡಿ ಸರ್ಕಲ್‌ನಲ್ಲಿ ಡಿ. 1ರಂದು ಬೆಳಗ್ಗೆ 10.30ಕ್ಕೆ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದೆ. ಅರ್ಹತಾ ಪರೀಕ್ಷೆಗೆ ಹೇಗೆ ತಯಾರಿ ಮಾಡಿಕೊಳ್ಳಬೇಕೆಂದು ಪರಿಣಿತ ಉಪನ್ಯಾಸಕರಿಂದ ಮಾರ್ಗದರ್ಶನ ನೀಡಲಾಗುತ್ತದೆ. ಮಾಹಿತಿಗೆ ಮೊ: 99805- 52080 ಅಥವಾ 99805-52081ಕ್ಕೆ ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement