ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಶಾಸಕ

Vishwanath S
Updated On : 1 Dec 2013, 12:21 pm

ಧಾರವಾಡ: ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೇ ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯತನ ತೋರಿದ ಅಧಿಕಾರಿಗಳ ವಿರುದ್ಧ ಶಾಸಕ ವಿನಯ ಕುಲಕರ್ಣಿ ಕಿಡಿಕಾರಿದ ಘಟನೆ ನಗರದ ತಾಲೂರು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು.
ಅನುದಾನದ ಕೊರತೆಯಿಂದಾಗಿ ತಾಲೂಕಿನಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳ ಮಾಹಿತಿ ಪಡೆದ ಶಾಸಕ ವಿನಯ ಕುಲಕರ್ಣಿ, ಸ್ಥಗಿತಗೊಂಡಿರುವ ಕಾಮಗಾರಿಗಳ ವಿವರ ನೀಡಿದರೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ ಅನುದಾನ ಬಿಡುಗಡೆಗೆ ಪ್ರಯತ್ನಿಸುವ ಭರವಸೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಪಡಿತರ ಚೀಟಿ ವಿತರಣೆಯಲ್ಲಿ ಆಗುತ್ತಿರುವ ಗೊಂದಲದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಸಮರ್ಪಕ ಪಡಿತರ ಚೀಟಿ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಹಿಂದಿನ ಶಾಸಕರು ಬಿಡುಗಡೆ ಮಾಡಿದ್ದ ಅನುದಾನ ಎಲ್ಲ ಬಳಕೆಯಾಗಿ ಯಾವುದೇ ಕಾಮಗಾರಿ ಬಾಕಿ ಉಳಿದಿಲ್ಲವೆಂದು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ವಿನಯ ಕುಲಕರ್ಣಿ, ಹಿಂದಿನ ಶಾಸಕರ ಅವಧಿಯಲ್ಲಿ ನಡೆದ ಕಾಮಗಾರಿಗಳ ವಿವರ ನೀಡುವಂತೆ ಆದೇಶಿಸಿದರು.
ಗ್ರಾಮೀಣ ಭಾಗದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಬಗೆ ಹರಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ಬೇಸಿಗೆ ಸಮಯದಲ್ಲಿ ಆಗುವ ವಿದ್ಯುತ್ ಪೂರೈಕೆಯ ಸಮಸ್ಯೆಗಳ ನಿವಾರಣೆಗೆ ಈಗಿನಿಂದಲೇ ಯೋಜನೆ ಸಿದ್ಧಪಡಿಸುವಂತೆ ಸಲಹೆ ನೀಡಿದರು.
ತಾಪಂ ಅಧ್ಯಕ್ಷೆ ಸುಮಾ ಕೌದೆಣ್ಣವರ, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಾ ಕೊಳ್ಳಾನಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement