ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕಳಸಾ-ಬಂಡೂರಿ ಹೋರಾಟಕ್ಕೆ ಬೆಂಬಲಿಸಿ

Vishwanath S
Updated On : 4 Oct 2013, 10:55 am

ಕನ್ನಡಪ್ರಭ ವಾರ್ತೆ, ಧಾರವಾಡ, ಅ. 3
ಕಳಸಾ-ಬಂಡೂರಿ ನಾಲಾ ವಿವಾದ ಬಗೆಹರಿಸಿ ಶೀಘ್ರ ಯೋಜನೆ ಜಾರಿಗಾಗಿ ಒತ್ತಾಯಿಸಿ ಅ. 7ರಂದು ಹುಬ್ಬಳ್ಳಿ-ಧಾರವಾಡ ಬಂದ್ ಆಚರಿಸಲಿದ್ದು, ಎಲ್ಲರೂ ಇದರಲ್ಲಿ ಭಾಗವಹಿಸಬೇಕೆಂದು ಹೋರಾಟ ಸಮನ್ವಯ ಸಮಿತಿ ಮುಖಂಡ ವಿಕಾಸ ಸೊಪ್ಪಿನ ಮನವಿ ಮಾಡಿದ್ದಾರೆ.
ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಯಿಂದ ಹುಬ್ಬಳ್ಳಿ-ಧಾರವಾಡದ ಮತ್ತು ಸುತ್ತಲಿನ ಹಳ್ಳಿಯ ನೀರಿನ ಬವಣೆ ನೀಗಲಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹರಿಸಿ ಶೀಘ್ರ ಯೋಜನೆ ಜಾರಿ ಮಾಡಬೇಕಿದೆ. ಆದ್ದರಿಂದ ಈ ಬಂದ್ ನಡೆಯಲಿದೆ. ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಹಕರಿಸಬೇಕೆಂದು ತಿಳಿಸಿದ್ದಾರೆ. ವಕೀಲರ ಸಂಘ ಬೆಂಬಲ: ಇದೇ ಸಂದರ್ಭ ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ ಮತ್ತು ಇತರ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಹುಬ್ಬಳ್ಳಿ-ಧಾರವಾಡ ಬಂದ್ ಕರೆ ಕುರಿತು ಗುರುವಾರ ಸಭೆ ಸೇರಿದ್ದ ಧಾರವಾಡ ವಕೀಲರ ಸಂಘದಲ್ಲಿ ಬೆಂಬಲಿಸಲು ತೀರ್ಮಾನಿಸಲಾಗಿದೆ.
ಅವಳಿ ನಗರ ಜನರಿಗೆ ಕುಡಿಯುವ ನೀರಿನ ಕೊರತೆ ನೀಗಿಸಲು ಈ ಯೋಜನೆ ಜಾರಿ ಅಗತ್ಯ. ಆದರೆ, ಸರ್ಕಾರಗಳು ವಿಳಂಬ ನೀತಿ ಅನುಸರಿಸುತ್ತಿವೆ. ಯೋಜನೆ ಕುರಿತು ಗೋವಾ ರಾಜ್ಯದ ವಿರೋಧದಿಂದಾಗಿ ಕೇಂದ್ರ ಸರ್ಕಾರ ನ್ಯಾಯಾಧೀಕರಣ ರಚನೆ ಮಾಡಿ ಸದರ ಯೋಜನೆಯ ಚಂಡನ್ನು ನ್ಯಾಯಾಧೀಕರಣದ ಅಂಗಳದಲ್ಲಿ ದೂಡಿದೆ.
ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಅಗತ್ಯವಾಗಿ ವಕೀಲರು ಬೆಂಬಲಿಸಲಿದ್ದಾರೆಂದು ಸಂಘದ ಅಧ್ಯಕ್ಷ ವಿ.ಡಿ. ಕಾಮರೆಡ್ಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement