ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸರ್ಕಾರಿ ವಾಹನ ದುರ್ಬಳಕೆ ತಡೆಗಟ್ಟಿ

Vishwanath S
Updated On : 6 Oct 2013, 11:31 am

ನವಲಗುಂದ: ತಾಲೂಕಿನಲ್ಲಿನ ವಿವಿಧ ಇಲಾಖೆ ಅಧಿಕಾರಿಗಳು ಸರ್ಕಾರಿ ವಾಹನಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಸಾರ್ವಜನಿಕರು ಅನೇಕ ದೂರುಗಳನ್ನು ನೀಡಿದ್ದು, ಅಂಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಆರ್.ಎಚ್. ಕೋನರಡ್ಡಿ ತಹಸೀಲ್ದಾರ್ ನವೀನ ಹುಲ್ಲೂರ ಅವರಿಗೆ ಒತ್ತಾಯಿಸಿದ್ದಾರೆ.
ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕೆಲಸ ಮಾಡಬೇಕೆಂಬ ಸರ್ಕಾರದ ಮಾರ್ಗದರ್ಶನ ಇದ್ದರೂ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಹಾಗೂ ಇತರೆ ಮಹಾನಗರಗಳಲ್ಲಿ ವಾಸಿಸುತ್ತಿರುವುದು ಕಂಡು ಬಂದಿದೆ. ದಿನನಿತ್ಯದ ಕಚೇರಿ ಕೆಲಸಕ್ಕೆ ಬರುವಾಗ ಮತ್ತು ಮರಳುವಾಗ ಸರ್ಕಾರಿ ವಾಹನಗಳನ್ನೆ ಬಳಸುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವುದಲ್ಲದೇ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಗಳು ನಡೆಯುವುದಿಲ್ಲ. ಹೆಚ್ಚಿನ ಇಂಧನ ಬಳಕೆಯಾಗಿ ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.
ಕೆಲಸದ ಸಮಯದಲ್ಲಿ ಮಾತ್ರ ವಾಹನ ಬಳಸಬೇಕು, ಕೆಲಸ ಮುಗಿದ ತಕ್ಷಣ ವಾಹನವನ್ನು ಕಚೇರಿಯಲ್ಲಿಯೇ ಬಿಟ್ಟು ಹೋಗಬೇಕೆಂಬ ಸೂಚನೆಯನ್ನು ಕಡ್ಡಾಯಗೊಳಿಸಬೇಕು. ಅನಿವಾರ್ಯ ಕಾರಣ ಬಂದಾಗ ಮೇಲಧಿಕಾರಿಗಳ ಅಧಿಕೃತ ಹಾಗೂ ಲಿಖಿತ ಪರವಾನಗಿ ಪಡೆದುಕೊಳ್ಳುವಂತಾಗಬೇಕು. ಕಾರಣ ತಾವು ಅಂತಹ ಅಧಿಕಾರಿಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಸರ್ಕಾರಿ ವಾಹನವನ್ನು ದುರುಪಯೋಗ ಪಡಿಸಿಕೊಳ್ಳುವ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರೇ ಅಂತಹ ವಾಹನಗಳನ್ನು ತಡೆದು ಪೊಲೀಸ್ ಇಲಾಖೆಗೆ ಒಪ್ಪಿಸಬೇಕಾಗುತ್ತದೆ. ಈ ಕುರಿತು ಹೆಚ್ಚಿನ ಅನಾಹುತಕ್ಕೆ ಆಸ್ಪದ ಕೊಡದೇ ಏಳು ದಿನದ ಒಳಗಾಗಿ ಅಧಿಕಾರಿಗಳ ಸಭೆ ಕರೆದು ಮಾರ್ಗದರ್ಶನ ಮಾಡಬೇಕೆಂದು ತಹಸೀಲ್ದಾರ್‌ಗೆ ಮನವಿ ಮೂಲಕ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement