ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಡಾ. ಹೆಗ್ಗಡೆ ವಿರುದ್ಧ ಹೇಳಿಕೆ ಸರಿಯಲ್ಲ: ಹೊರಟ್ಟಿ

Mainashree
Updated On : 18 Oct 2013, 11:35 am

ಹುಬ್ಬಳ್ಳಿ: ಸುಕ್ಷೇತ್ರ ಧರ್ಮಸ್ಥಳದ ಆಡಳಿತಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ವೈಯಕ್ತಿಕ ನೆಲೆಯಲ್ಲಿ ಆಪಾದನೆ ಮಾಡುವ ಮೂಲಕ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿರುವುದು ಖಂಡನೀಯ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಅವರು, ದೇಶವಿದೇಶಗಳಲ್ಲಿ ಅಪಾರ ಭಕ್ತರನ್ನು ಹೊಂದಿರುವ ನಾಡಿನ ಸೇವೆಯಲ್ಲಿ ಡಾ. ವೀರೇಂದ್ರ ಹೆಗ್ಗಡೆ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕು ನೀಡಿದ್ದಾರೆ. ಗ್ರಾಮೀಣ ಮಹಿಳೆಯರ ಬದುಕಿಗೆ ಹೊಸ ದಾರಿ ನೀಡಿರುವ ಅವರ ವಿರುದ್ಧ ವೈಯಕ್ತಿಕ ನೆಲೆಯಲ್ಲಿ ಆಪಾದನೆ ಮಾಡುವುದು ಸರಿಯಲ್ಲ ಎಂದರು.
ಸಮಾಜದಲ್ಲಿ ಸಂಭವಿಸುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಹತ್ತಿಕ್ಕಲು ಪೊಲೀಸ್ ಮತ್ತು ಕಾನೂನು ವ್ಯವಸ್ಥೆ ಇದೆ. ಪಾರದರ್ಶಕ ವ್ಯವಸ್ಥೆ ಹೊಂದಿರುವ ಸುಕ್ಷೇತ್ರ ಧರ್ಮಸ್ಥಳದ ಆಡಳಿತಾಧಿಕಾರಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ಬಿಟ್ಟು, ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಮಾಡುವ ಅಪಪ್ರಚಾರದಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement