ಮರಳು ಸಾಗಣೆ ಸಮಸ್ಯೆ ಶೀಘ್ರ ಪರಿಹಾರ
ಹುಬ್ಬಳ್ಳಿ: ಮರಳು ಸಾಗಾಣಿಕೆ ಕುರಿತಂತೆ ಉದ್ಭವಿಸಿರುವ ಸಮಸ್ಯೆಯನ್ನು ಶೀಘ್ರ ಪರಿಹರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದ್ದಾರೆ.
ಅಸೋಸಿಯೆಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ ಅಧ್ಯಕ್ಷ ಸುರೇಶ ಕಿರೇಸೂರ ಮತ್ತು ತುಂಗಭದ್ರಾ ಮರಳು ಸಾಗಾಣಿಕೆದಾರರ ಸಂಘದ ಕಾರ್ಯದರ್ಶಿ ಪ್ರಭಾಕರ ಉಪಾಧ್ಯ ನೇತೃತ್ವದಲ್ಲಿ ಅವರನ್ನು ಭೇಟಿಯಾಗಿದ್ದ ನಿಯೋಗಕ್ಕೆ ಈ ಭರವಸೆ ನೀಡಿದ್ದಾರೆ.
ಮರಳು ಸಾಗಾಣಿಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಉದ್ಯೋಗಕ್ಕೆ ಹೊಡೆತ ಬಿದ್ದಿದೆ. ಮರಳು ಇಲ್ಲದ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದ ಕಾರ್ಮಿಕರಿಗೆ ಉದ್ಯೋಗವಿಲ್ಲದಂತಾಗಿದೆ. ಅಲ್ಲದೆ, ಸಾಲ ಮಾಡಿ ಮನೆ ನಿರ್ಮಿಸುತ್ತಿರುವ ಜನರಿಗೂ ತೊಂದರೆಯಾಗುತ್ತಿದೆ ಎಂದು ಸುರೇಶ ಮತ್ತು ಪ್ರಭಾಕರ ಉಪಾಧ್ಯ ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎನ್.ಎಸ್. ನಾಡಿಗೇರ, ಸೋಮಶೇಖರ ಬೆಂಡಿಗೇರಿ, ಸುಬ್ರಮಣ್ಯ ಶಿರಕೋಳ, ಅನ್ನು ಮ್ಯಾಗೇರಿ ಇನ್ನಿತರರು ಇದ್ದರು.