ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಧೂಳಿನಿಂದ ಕೂಡಿದ ರಸ್ತೆ ದುರಸ್ತಿಗಾಗಿ ಪ್ರತಿಭಟನೆ

Lingaraj Badiger
Updated On : 23 Oct 2013, 11:01 am

ಹುಬ್ಬಳ್ಳಿ: ಒಳಚರಂಡಿ ನಿರ್ಮಾಣ ಕಾಮಗಾರಿ ಸಮಯದಲ್ಲಿ ಅಗೆದ ರಸ್ತೆಗಳಿಂದ ಏಳುತ್ತಿರುವ ಧೂಳಿನಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತಿದ್ದು, ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಆಗ್ರಹಿಸಿ ಗಜಾನನ ಮಹಾಮಂಡಳ ಅಧ್ಯಕ್ಷ ಡಿ. ಗೋವಿಂದರಾವ್ ನೇತೃತ್ವದಲ್ಲಿ ಮಂಗಳವಾರ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಲಾಯಿತು.
ರೈಲು ನಿಲ್ದಾಣ ರಸ್ತೆ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಒಳಚರಂಡಿ ನಿರ್ಮಾಣಕ್ಕೆ ರಸ್ತೆಗಳನ್ನು ಅಗೆಯಲಾಗಿದೆ. ಒಳಚರಂಡಿ ಪೈಪ್‌ಗಳನ್ನು ಹಾಕಿ ತಿಂಗಳಾದರೂ ರಸ್ತೆ ದುರಸ್ತಿ ಕೆಲಸ ಕೈಗೆತ್ತಿಕೊಂಡಿಲ್ಲ. ವಾಹನ ಸಂಚಾರದಿಂದ ಈ ಪ್ರದೇಶದಲ್ಲಿ ಉಂಟಾಗುತ್ತಿರುವ ಧೂಳಿನ ವಾತಾವರಣದಿಂದ ವ್ಯಾಪಾರ ವಹಿವಾಟು ಕುಸಿದಿದೆ. ಅಂಗಡಿಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಲ್ಲಿ ಅಲರ್ಜಿ, ಕೆಮ್ಮು ಮುಂತಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ನೆನಗುದಿಗೆ ಬಿದ್ದ ರಸ್ತೆ ದುರಸ್ತಿ ಕೆಲಸವನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement