ಮಂಜುನಾಥ ಹೆಗಡೆ ಆಯ್ಕೆ
ಧಾರವಾಡ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸಾರಸ್ವತಪುರ ಸ.ಮಾ.ಕ. ಪ್ರಾಥಮಿಕ ಶಾಲೆ ಮುಖ್ಯಾಧ್ಯಾಪಕ ಮಂಜುನಾಥ ಹೆಗಡೆ ನೇಮಕಗೊಂಡಿದ್ದಾರೆ. ಪ್ರಾಥಮಿಕ ಶಿಕ್ಷಕರ ಮತ್ತು ಸರ್ಕಾರಿ ನೌಕರರ ಸಂಘಟನೆಗಳ ಚಟುವಟಿಕೆಗಳಲ್ಲಿ ಮತ್ತು ಹೋರಾಟಗಳಲ್ಲಿ ಸಕ್ರಿಯವಾಗಿರುವ ಇವರು, ಉತ್ತಮ ಶಿಕ್ಷಕರಾಗಿಯೂ ಗುರುತಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಸೇವಾ ಹಿರಿತನ ಹೊಂದಿರುವ ಹೆಗಡೆಯವರು, ವಿವಿಧ ಸಂಘಟನೆಗಳಲ್ಲಿ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.