ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿ

Rashmi Kasaragodu
Updated On : 30 Oct 2013, 11:00 am

ಧಾರವಾಡ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸನ್ನಡತೆ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಬುಧವಾರ ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳು ಪ್ರತಿಭಟನೆ ನಡೆಸಿದರು. ಯಾವುದೋ ಕೆಟ್ಟ ಸಂದರ್ಭದಲ್ಲಿ ತಪ್ಪು ಮಾಡಿದ ಫಲವಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದೇವೆ. ಆದರೆ, ನಮ್ಮ ತಪ್ಪಿನ ಅರಿವಾಗಿದ್ದು, ಈಗಾಗಲೇ ಎಂಟರಿಂದ ಹತ್ತು ವರ್ಷಗಳ ಕಾಲ ಶಿಕ್ಷೆ ಅನುಭವಿಸಿದ್ದೇವೆ. ಸರ್ಕಾರ ನಮ್ಮ ಮೇಲೆ ಕರುಣೆ ತೋರಿ ರಾಜ್ಯೋತ್ಸವದ ಈ ಸಂದರ್ಭದಲ್ಲಾದರೂ ಸನ್ನಡತೆ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ಕಾರಾಗೃಹದ ಪ್ರಭಾರಿ ಅಧೀಕ್ಷಕರಾದ ನಾಗರತ್ನಾ ಅವರ ಮೂಲಕ ಸುಮಾರು 70 ಕೈದಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರದ ವೇಳೆ ಈ ರೀತಿ ಕೈದಿಗಳನ್ನು ಬಿಡಲಾಗಿತ್ತು. ಅಲ್ಲದೆ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಉತ್ತಮ ಚಾರಿತ್ರ್ಯ ಉಳ್ಳವರನ್ನು ಬಿಡುಗಡೆ ಮಾಡುವ ಪದ್ಧತಿ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮನಸ್ಸು ಮಾಡಿ ನಮ್ಮ ಬಿಡುಗಡೆಗೆ ಅಂಕಿತ ಹಾಕಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹದ ಮೂಲಕ ನಮ್ಮ ಬೇಡಿಕೆ ಈಡೇರಿಸಿಕೊಳ್ಳಬೇಕಾಗುತ್ತದೆ ಎಂದು ಕೈದಿಗಳು ಮನವಿಯಲ್ಲಿ ಎಚ್ಚರಿಸಿದ್ದಾರೆ. ಇದೇ ವೇಳೆ ಶಾಸಕ ಕೋನರೆಡ್ಡಿ ಕೈದಿಗಳನ್ನು ಭೇಟಿ ಮಾಡಿ ಚಳಿಗಾಲದ ಅಧಿವೇಶನದಲ್ಲಿ ಸನ್ನಡತೆಯ ಕೈದಿಗಳ ಬಿಡುಗಡೆ ಮಾಡುವ ಕುರಿತು ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement